Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

 

ಚಿತ್ರದುರ್ಗ. ಅ.07: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ “ಪೂರ್ಣಾವಧಿ/ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ / ಸ್ಥಾನಿಕ ಸಂಪಾದಕರ / ಮುಖ್ಯಸ್ಥರ ಶಿಫಾರಸ್ಸು ಪತ್ರ ಮತ್ತು ಸೇವಾ ಪ್ರಮಾಣ ಪತ್ರವನ್ನು ಲಗತ್ತಿಸಿ “ಸೇವಾ ಸಿಂಧು” ಫೋರ್ಟಲ್ https://sevasindhu.karnataka.gov.in
ಮೂಲಕ ಸಮೀಪದ ಗ್ರಾಮ-1 ಕೇಂದ್ರದಲ್ಲಿ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಈ ಹಿಂದೆ ಇದ್ದ ಮಾರ್ಗಸೂಚಿಯಲ್ಲಿ 11 ತಿಂಗಳ ವೇತನ ಪತ್ರ ಸಲ್ಲಿಸಬೇಕು ಎಂಬ ಷರತ್ತನ್ನು ಸಡಿಲಿಸಿ. ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರ, ಸ್ಥಾನಿಕ ಸಂಪಾದಕರ/ಮುಖ್ಯಸ್ಥರ ಶಿಫಾರಸ್ಸು ಪತ್ರವನ್ನು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಆನ್‍ಲೈನ್‍ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಸುದ್ದಿ ಸಂಗ್ರಹಿಸಲು ಅನುಕೂಲ ಕಲ್ಪಿಸಲು ಸರ್ಕಾರವು ವಾರ್ತಾ ಇಲಾಖೆಯ ಮೂಲಕ ಉಚಿತ ಬಸ್ ಪಾಸ್‍ಗಳನ್ನು ನೀಡುತ್ತಿದೆ.

ರಾಜ್ಯದ ಎಲ್ಲಾ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಫೋರ್ಟಲ್ ಮೂಲಕ ಗ್ರಾಮ-1 ಕೇಂದ್ರದ ಮೂಲಕ 2026 ರ ಅಕ್ಟೋಬರ್ 31 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now