ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಅ. 07 : ವಿಧಾನ ಪರಿಷತ್‍ನ ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರರಾಗಿ ಶಿಕ್ಷಣ ಇಲಾಖೆಯ ನಿವೃತ್ತ ಅಧಿಕಾರಿ ಸೈಯದ್ ಅಫಾಖ್ ಅಹಮದ್ ಸ್ಪರ್ದಿಸಿದ್ದು ಇಂದು ಬೆಂಗಳೂರಿನ ಶಾಂತಿ ನಗರದಲ್ಲಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ಅ.6 ರಂದು ನಾಮಪತ್ರವನ್ನು ಸಲ್ಲಿಸಿದ್ದು ಅದು ಅಂಗೀಕಾರವಾಗಿದೆ.
ಈ ಬಗ್ಗೆ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಶಿಕ್ಷಣ ಕ್ಷೇತ್ರ ಹಲವಾರು ಸಮಸ್ಯೆಗಳನ್ನು ಎದುರಿ ಸುತ್ತಿದೆ. ಶಿಕ್ಷಕರು ಎದರಿಸುತ್ತಿರುವ ನೂರೆಂಟು ಬಗೆಯ ಸಮಸ್ಯೆಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯ ಕಲ್ಪಿಸಿಕೊಡ ಬೇಕು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧನೆ ಮಾಡಬೇಕು ಎನ್ನುವ ದೃಷ್ಟಿಯಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದ ಅವರು 2026ರಲ್ಲಿ ನಡೆಯಲಿರುವ ವಿಧಾನ ಪರಿಷತ್ ಆಗ್ನೆಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಈಗಾಗಲೇ ಮತದಾರರ ನೋಂದಣಿ ಕಾರ್ಯ ಮುಗಿದಿದ್ದು, ತಾವು ಈ ಕ್ಷೇತ್ರದಲ್ಲಿ ಮತದಾರರನ್ನು ನೊಂದಾಯಿಸುವ ಕೆಲಸದಲ್ಲಿ ಮಾಡಿದ್ದೇನೆ ಎಂದು ತಿಳಿಸಿದರು.
ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದೇನೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಕ್ಷೇತ್ರದ ವಿವಿಧ ಹುದ್ದೆಗಳಲ್ಲಿ ಸೇವೆಸಲ್ಲಿಸಿದ್ದು, ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಶಿಕ್ಷಣ ಕ್ಷೇತ್ರದ ಸಂಪೂರ್ಣ ಮಾಹಿತಿ ಇದ್ದು, ಹಲವಾರು ಹಿತೈಷಿಗಳ ಒತ್ತಾಸೆಯೂ ಇರುವ ಕಾರಣ ಬಯಲು ಸೀಮೆಯ ಮದ್ಯ ಕರ್ನಾಟಕದಿಂದ ವಿಧಾನ ಪರಿಷತ್‍ನ ಆಗ್ನೆಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಸೈಯದ್ ಅಫಾಖ್ ಅಹಮದ್ ಹೇಳಿದರು.










