Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ 75 ವರ್ಷಗಳ ಭೀಕರ ಬರದಿಂದ 90% ಬೆಳೆ ನಷ್ಟ : ಡಿಸಿಎಂ ಡಾ.ಜಿ.ಪರಮೇಶ್ವರ್

---Advertisement---

ಬಳ್ಳಾರಿ: ಕರ್ನಾಟಕದಲ್ಲಿ ಕಳೆದ 75 ವರ್ಷಗಳಲ್ಲೇ ಕಾಣದಂತಹ ಭೀಕರ ಬರಗಾಲ ಎದುರಾಗಿದ್ದು, ಸಂಕಷ್ಟದಲ್ಲಿರುವ ಅನ್ನದಾತರ ನೆರವಿಗೆ ನಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರೂ ಆದ ಡಾ.ಜಿ. ಪರಮೇಶ್ವರ ಅವರು ಹೇಳಿದರು.

ಬುಧವಾರ, ಬಳ್ಳಾರಿ ತಾಲೂಕಿನ ಹಲಕುಂದಿ ಗ್ರಾಮದಲ್ಲಿ ಮಳೆ ಕೊರತೆಯಿಂದ ಹೊಲದಲ್ಲಿ ಒಣಗುತ್ತಿರುವ ತೊಗರಿ ಬೆಳೆಗಳನ್ನು ಖುದ್ದು ವೀಕ್ಷಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಬರಪೀಡಿತ ತಾಲೂಕುಗಳ ಘೋಷಣೆ

ಕರಾವಳಿ ತೀರದ 10–15 ತಾಲೂಕುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಭಾಗಗಳಲ್ಲಿ ಭೀಕರ ಬರ ಆವರಿಸಿದೆ. ಈಗಾಗಲೇ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಉಳಿದ 23 ತಾಲೂಕುಗಳಲ್ಲಿ ಕ್ಷೇತ್ರಗಳ ವಾಸ್ತವಿಕ ಪರಿಶೀಲನೆ ನಡೆಯುತ್ತಿದ್ದು, ಅವುಗಳಲ್ಲಿಯೂ 10 ರಿಂದ 15 ತಾಲೂಕುಗಳನ್ನು ಶೀಘ್ರವೇ ಬರಪೀಡಿತ ಪಟ್ಟಿಗೆ ಸೇರಿಸಲಾಗುವುದು. ರಾಜ್ಯದಲ್ಲಿ ಶೇಕಡಾ 90 ರಷ್ಟು ಬೆಳೆ ಹಾನಿಯಾಗಿದೆ. ರೈತರು ಬೆಳೆದ ತೊಗರಿ, ಜೋಳ ಸಂಪೂರ್ಣ ನೆಲಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ಮತ್ತು ಅನುದಾನ

ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಪರಿಸ್ಥಿತಿ ನಿಭಾಯಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಟ್ಟು ರೂ. 306 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳ ಖಾತೆಯಲ್ಲಿರುವ ಹಣವನ್ನು ಬಳಸಿಕೊಂಡು ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಮೊದಲ ಕಂತಿನ ಪರಿಹಾರ

ರೈತರಿಗೆ ತಕ್ಷಣದ ನೆರವಿಗಾಗಿ ಮೊದಲ ಕಂತಿನಲ್ಲಿ ರೂ. 2,500 ಬರ ಪರಿಹಾರವನ್ನು ರಾಜ್ಯ ಸರ್ಕಾರವೇ ಬಿಡುಗಡೆ ಮಾಡಲು ಆದೇಶ ಹೊರಡಿಸಿದ್ದು, ಶೀಘ್ರ ರೈತರಿಗೆ ಪಾವತಿಯಾಗಲಿದೆ. ಬರದಿಂದಾಗಿ ರಾಜ್ಯಕ್ಕೆ ಒಟ್ಟು ರೂ. 46,000 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ. ಎನ್‌ಡಿಆರ್‌ಎಫ್ ನಿಯಮಾವಳಿಗಳ ಪ್ರಕಾರ ರಾಜ್ಯ ಸರ್ಕಾರವು 11,000 ಕೋಟಿ ನೆರವು ನೀಡುವಂತೆ ಕೇಂದ್ರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದೆ. ಕೇಂದ್ರ ಬರ ಅಧ್ಯಯನ ತಂಡ ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಅವರು ನೀಡುವ ವರದಿಯ ಆಧಾರದಲ್ಲಿ ಶೀಘ್ರವೇ ಕೇಂದ್ರದಿAದ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದರು.

ರೈತರ ಸಾಲ ವಸೂಲಾತಿ ಮುಂದೂಡಿಕೆ

ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ನಿಲ್ಲಲಿದ್ದು, ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಿದ ಉಪಮುಖ್ಯಮಂತ್ರಿಗಳು, ಸಹಕಾರಿ ಹಾಗೂ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ರೈತರ ಸಾಲ ವಸೂಲಾತಿಯನ್ನು ವರ್ಷಕಾಲ ಮುಂದೂಡಲು ಸೂಚನೆ ನೀಡಲಾಗಿದೆ. ಇದಲ್ಲದೆ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿದ್ಯುತ್ ಸಬ್ಸಿಡಿ ಮೂಲಕ ಬಡ ಹಾಗೂ ರೈತ ಕುಟುಂಬಗಳಿಗೆ ವಾರ್ಷಿಕ 60,000 ದಿಂದ 70,000 ಕೋಟಿ ರೂ. ಆರ್ಥಿಕ ನೆರವು ತಲುಪುತ್ತಿದೆ. ಬರ ಪರಿಹಾರ ಕಾಮಗಾರಿಗಳೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Join WhatsApp

Join Now

Join Telegram

Join Now