ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳ ಕುರಿತು ಮಾಹಿತಿ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ರೋಟರಿ ಕ್ಲಬ್ ಚಿತ್ರದುರ್ಗ ಹಾಗೂ ಯುವಜಯ ಫೌಂಡೇಶನ್ ವತಿಯಿಂದ ‘ಯುವಜಯ ಫಸ್ಟ್ ಜಾಬ್ 2026’ ವೃತ್ತಿ ಮಾರ್ಗದರ್ಶನ ಹಾಗೂ ಕೌನ್ಸೆಲಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.
ಕಾರ್ಯಕ್ರಮವು ಅಕ್ಟೋಬರ್ 10, 2026ರಂದು ಚಿತ್ರದುರ್ಗದ ಡಿ.ಸಿ. ಸರ್ಕಲ್ ಬಳಿ ಇರುವ ರೋಟರಿ ಕ್ಲಬ್ ಚಿತ್ರದುರ್ಗ, ರೋಟರಿ ಬಾಲಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವು ಎರಡು ಅವಧಿಗಳಲ್ಲಿ ಆಕಾಂಕ್ಷಿಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು. ಅವಧಿ ಸಂಜೆ 3 ರಿಂದ 5 ಗಂಟೆಯವರೆಗೆ ನಡೆಯಲಿದೆ.
ಪದವೀಧರರು ಉದ್ಯೋಗ ಪಡೆಯಲು ಅಗತ್ಯವಿರುವ ವೃತ್ತಿ ಮಾರ್ಗದರ್ಶನ, ಉದ್ಯೋಗ ಕೌಶಲ್ಯ, ರೆಸ್ಯೂಮ್ ತಯಾರಿ, ಸಂದರ್ಶನ ಕೌಶಲ್ಯ, ಸಂವಹನ ಕೌಶಲ್ಯ, ಉದ್ಯೋಗಾವಕಾಶಗಳ ಕುರಿತು ಮಾಹಿತಿ ಹಾಗೂ ಪ್ಲೇಸ್ಮೆಂಟ್ಗೆ ಅಗತ್ಯವಾದ ಮಾರ್ಗದರ್ಶನವನ್ನು ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ.
ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ:
📞 +91 8892600667
📞 +91 8105476196
ಸ್ಥಳ: ರೋಟರಿ ಕ್ಲಬ್ ಚಿತ್ರದುರ್ಗ, ರೋಟರಿ ಬಾಲಭವನ,ಡಿ.ಸಿ. ಸರ್ಕಲ್, ಚಿತ್ರದುರ್ಗ.











