ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಜಹೀರ್ ಗ್ರೂಪ್ ಮಾಲೀಕರು ಹಾಗೂ ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ
ಬರಗೇರಿ ಬೀದಿಯ ನಿವಾಸಿ ಎಂ.ಬಿ.ಸಿರಾಜುದ್ದಿನ್(58) ಬುಧವಾರ ಸಂಜೆ 4-30 ಕ್ಕೆ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜಗಳೂರು ತಾಲ್ಲೂಕಿನ ಸಂತೆ ಮುದ್ದಾಪುರದ ಖಬರಸ್ಥಾನದಲ್ಲಿ ಮೃತರ ಅಂತ್ಯಕ್ರಿಯೆ ಗುರವಾರ ನೆರವೇರಿಸಲಾಯಿತೆಂದು ಮೃತರ ಕುಟುಂಬದವರು ತಿಳಿಸಿದ್ದಾರೆ.










