Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರೀತಿ, ವಿಶ್ವಾಸ, ಸಹೋದರತ್ವ ಬೆಳೆಸುವುದೇ ಕ್ರೀಡೆಯ ಉದ್ದೇಶ: ಡಿಡಿಪಿಐ ಮಂಜುನಾಥ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 08 : ಪರಸ್ಪರ ಪ್ರೀತಿ, ವಿಶ್ವಾಸ, ಸಹೋದರತ್ವ, ಆತ್ಮವಿಶ್ವಾಸ ಬೆಳೆಸುವುದೇ ಕ್ರೀಡೆಯ ಉದ್ದೇಶ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕ್ರೀಡಾಂಗಣದಲ್ಲಿ ನಡೆದ 2026-27 ನೇ ಸಾಲಿನ ಹದಿನಾಲ್ಕು ಮತ್ತು ಹದಿನೇಳು ವರ್ಷದ ಬಾಲಕ-ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಫುಟ್‍ಬಾಲ್ ಪಂದ್ಯಾವಳಿಯಲ್ಲಿ ಜಯಶಾಲಿಗಳಾದ ತಂಡಕ್ಕೆ ಬಹುಮಾನ ವಿತರಿಸಿ ಮಾತನಾಡಿದರು.

ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಶಾರೀರಿಕ ಹಾಗೂ ಮಾನಸಿಕವಾಗಿ ಸದೃಢರಾಗಲು ಸಹಾಯವಾಗುತ್ತದೆ. ಸರ್ಕಾರ ಕೂಡ ಮಕ್ಕಳನ್ನು ಕ್ರೀಡೆಯಲ್ಲಿ ಉತ್ತೇಜಿಸುತ್ತಿದೆ. ಇದಕ್ಕೆ ಪೋಷಕರು ಹಾಗೂ ಶಿಕ್ಷಕರುಗಳು ಕೈಜೋಡಿಸಬೇಕು. ರಾಜ್ಯ ಮಟ್ಟದಲ್ಲಿ ಉನ್ನತ ಸಾಧನೆಗೈದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವಂತೆ ಕ್ರೀಡಾಪುಟಗಳಿಗೆ ಶುಭ ಹಾರೈಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ ಮಾತನಾಡಿ ಚಿಕ್ಕೋಡಿಯಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡೆಯಲ್ಲಿಯೂ ನಿಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಜಯಶಾಲಿಗಳಾಗುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಕ್ರೀಡಾಪಟುಗಳಿಗೆ ಹರಸಿದರು.

ಹಿರಿಯ ನ್ಯಾಯವಾದಿಗಳಾದ ಫಾತ್ಯರಾಜನ್, ನೂರಲ್ಲಾ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಕನಕ, ಜಗದೀಶ್, ಶಿವಾನಾಯ್ಕ, ದೈಹಿಕ ಶಿಕ್ಷಕರುಗಳಾದ ಗೀತ, ಅನ್ನಪೂರ್ಣ
ಮಂಜುನಾಥ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now