Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಕ್ಟೋಬರ್ 11 ರಂದು ಕೆ-ಸೆಟ್ ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

JEE Main 2027 exam dates announced
---Advertisement---

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ರ ಪರೀಕ್ಷೆಯು ‌ ಅಕ್ಟೋಬರ್ 11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಎಲ್ಲಾ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಭದ್ರತೆ ಮತ್ತು ನಿಷೇಧಾಜ್ಞೆ

 ಪರೀಕ್ಷೆಯು ನ್ಯಾಯಸಮ್ಮತವಾಗಿ ನಡೆಯಲು ಪರೀಕ್ಷಾ ದಿನದಂದು ಬೆಳಿಗ್ಗೆ 09.00 ರಿಂದ ಮಧ್ಯಾಹ್ನ 02.00 ಗಂಟೆಯವರೆಗೆ ಎಲ್ಲಾ 22 ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ ಎಸ್ ಎಸ್ )-2023 ರ ಸೆಕ್ಷನ್ 163 ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಪರೀಕ್ಷಾ ವ್ಯವಸ್ಥೆ

 ಪ್ರಶ್ನೆಪತ್ರಿಕೆ ವಿತರಣೆಗೆ ಒಟ್ಟು 07 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರಶ್ನೆಪತ್ರಿಕೆ ಸಾಗಾಟಕ್ಕಾಗಿ ತ್ರಿ-ಸದಸ್ಯ ಸಮಿತಿ ಹಾಗೂ ವಾಹನಕ್ಕೆ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ‘ವೆಬ್ ಕಾಸ್ಟಿಂಗ್’  ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಬಿಡುವ ಮುನ್ನ ‘ಹಾಲ್ ಟಿಕೆಟ್ ಸ್ಕ್ಯಾನ್’ ಹಾಗೂ ‘ಫೇಸ್ ರೆಕಗ್ನಿಷನ್’ ಮೂಲಕ ಪರಿಶೀಲನೆ ನಡೆಸಲಾಗುತ್ತದೆ. ಪ್ರತಿ 05 ಕೇಂದ್ರಗಳಿಗೆ 1 ರಂತೆ ಫ್ಲೈಯಿಂಗ್ ಸ್ಕ್ವಾಡ್  ಹಾಗೂ ಸೂಕ್ತ ಉಡುಪು ಪರಿಶೀಲನೆಗೆ ‘ಡ್ರೆಸ್ ಕೋಡ್ ಆಫೀಸರ್’ ಅವರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರ ಗಳ ಒಳಗೆ ಮೊಬೈಲ್, ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ. ಪರೀಕ್ಷಾ ಸಮಯದಲ್ಲಿ ತಡೆರಹಿತ ವಿದ್ಯುತ್ ಪೂರೈಕೆಗೆ ಇಲಾಖೆಗೆ ನಿರ್ದೇಶಿಸಲಾಗಿದೆ.

Join WhatsApp

Join Now

Join Telegram

Join Now