Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರೈತರಿಗೆ ಗುಡ್ ನ್ಯೂಸ್ : ನವೆಂಬರ್ 1ರಿಂದ ‘ನೇಗಿಲ ಯೋಗಿ’ ಯೋಜನೆ ಜಾರಿ

---Advertisement---

ಬೆಂಗಳೂರು: ರೈತರ ಶ್ರಮಕ್ಕೆ ತಕ್ಕ ಬೆಲೆ ಕಲ್ಪಿಸುವುದು ಮತ್ತು ಕೃಷಿ ಕ್ಷೇತ್ರಕ್ಕೆ ಆಧುನಿಕ ತಂತ್ರಜ್ಞಾನದ ಬಲ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ತಂತ್ರಜ್ಞಾನ ಹಾಗೂ ಯಾಂತ್ರೀಕರಣದ ಮೂಲಕ ಕೃಷಿ ಚಟುವಟಿಕೆಗಳನ್ನು ಮತ್ತಷ್ಟು ಸುಲಭ, ಪರಿಣಾಮಕಾರಿ ಹಾಗೂ ಲಾಭದಾಯಕವಾಗಿಸಲು ರೂಪಿಸಲಾಗಿರುವ ನೂತನ ‘ನೇಗಿಲ ಯೋಗಿ’ ಯೋಜನೆ ನವೆಂಬರ್ 1ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಜಿ-ಫಾರ್ಮ್ ಆ್ಯಪ್ ಮೂಲಕ ಸೌಲಭ್ಯ

ರೈತರಿಗೆ ಈ ಯೋಜನೆಯ ಪ್ರಯೋಜನಗಳನ್ನು ಸುಲಭವಾಗಿ ತಲುಪಿಸಲು ಸರ್ಕಾರ ವಿಶೇಷವಾಗಿ ‘ಜಿ-ಫಾರ್ಮ್’ ಆ್ಯಪ್‌ ಅನ್ನು ಸಜ್ಜುಗೊಳಿಸಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಕೃಷಿ ಯಂತ್ರೋಪಕರಣಗಳು ಹಾಗೂ ಸರ್ಕಾರದ ಸೌಲಭ್ಯಗಳನ್ನು ನೇರವಾಗಿ ಪಡೆದುಕೊಳ್ಳಲು ಈ ಆ್ಯಪ್ ನೆರವಾಗಲಿದೆ.

ರೈತರಿಂದ ಅಭೂತಪೂರ್ವ ಸ್ಪಂದನೆ

ಯೋಜನೆ ಘೋಷಣೆಯಾದ ಬೆನ್ನಲ್ಲೇ ರೈತ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈವರೆಗೂ 2.5 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ರೈತರ ಬೆನ್ನೆಲುಬಾಗಿ ನಿಲ್ಲುವ ಸಂಕಲ್ಪದೊಂದಿಗೆ ಜಾರಿಯಾಗುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆಯು ಗ್ರಾಮೀಣ ಭಾಗದಲ್ಲಿ ಕೃಷಿ ಯಾಂತ್ರೀಕರಣಕ್ಕೆ ಹೊಸ ವೇಗ ನೀಡುವ ನಿರೀಕ್ಷೆಯಿದೆ.

Join WhatsApp

Join Now

Join Telegram

Join Now