Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಇಂದು ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್ ಘೋಷಣೆ

---Advertisement---

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಾರುತಗಳು ಬಿರುಸುಗೊಂಡಿದ್ದು, ಇಂದು ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಈ ಐದು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ರವಾನಿಸಲಾಗಿದೆ. ಸಂಭಾವ್ಯ ಹಾನಿ ತಪ್ಪಿಸಲು ಸಾರ್ವಜನಿಕರು ಮತ್ತು ಕೃಷಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಕರೆ ನೀಡಿದೆ.

ರಾಜಧಾನಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡದಲ್ಲಿ ಒಣ ಹವೆ ಮುಂದುವರಿಯಲಿದೆ. ಮತ್ತೊಂದೆಡೆ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಬಿಸಿಲಿನ ವಾತಾವರಣವೇ ಪ್ರಾಬಲ್ಯ ಸಾಧಿಸಲಿದೆ.

Join WhatsApp

Join Now

Join Telegram

Join Now