Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ರೋಟರಿ ಕ್ಲಬ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 09 : ರೋಟರಿ ಕ್ಲಬ್ ಚಿತ್ರದುರ್ಗ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಹಾಗೂ ವಿದ್ಯಾ ವಿಕಾಸ ಶಾಲೆ, ನಾಯಕನಹಟ್ಟಿ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಾಳೆ, ಅಕ್ಟೋಬರ್ 10, 2026ರ ಶನಿವಾರದಂದು ಆಯೋಜಿಸಲಾಗಿದೆ ಎಂದು ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ಈ ಶಿಬಿರವು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಯಕನಹಟ್ಟಿಯ ವಿದ್ಯಾ ವಿಕಾಸ ಶಾಲೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್ ಸೇರಿದಂತೆ ವಿವಿಧ ಕಾಯಿಲೆಗಳ ತಪಾಸಣೆ ಹಾಗೂ ತಜ್ಞ ವೈದ್ಯರಿಂದ ಆರೋಗ್ಯ ಸಲಹೆಗಳನ್ನು ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ಸಂಬಂಧಿಸಿದ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಮಾರ್ಗದರ್ಶನವನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ನಾಯಕನಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೋಟರಿ ಕ್ಲಬ್ ಚಿತ್ರದುರ್ಗದ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ಅವರು ಮನವಿ ಮಾಡಿದ್ದಾರೆ. ಶಿಬಿರದಲ್ಲಿ ಉಚಿತ ತಪಾಸಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9901653964, 9591104553, 9449510078 ಈ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now