ಬೆಂಗಳೂರು: ಬಜೆಟ್ ಮೇಲಿನ ಚರ್ಚೆಯ ವೇಳೆ ಕಾಂಗ್ರೆಸ್ ಜೆಡಿಎಸ್ ನಾಯಕರು ಒಬ್ಬರಿಗೊಬ್ಬರು ತಿರುಗೇಟು ನೀಡುತ್ತಿದ್ದಾರೆ. ಈ ವೇಳೆ ಕುಮಾರಸ್ವಾಮಿ ಪರ ಸಚಿವ ಆರ್ ಅಶೋಕ್ ಬ್ಯಾಟಿಂಗ್ ಮಾಡಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ ಚರ್ಚೆಗೆ ಸರ್ಕಾರ ಉತ್ತರ ಕೊಡಬೇಕು. ಅದನ್ನ ಬಿಟ್ಟು ಕಾಂಗ್ರೆಸ್ ಸದಸ್ಯರು ಯಾಕೆ ಪದೇ ಪದೇ ಎದ್ದು ಮಾತನಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರ ಮಾತಿಗೆ ಬೆಂಬಲ ಸೂಚಿಸಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಚರ್ಚೆ ಮುಂದುವರೆಸಿದರು. ದೇವೇಗೌಡರು 10 ತಿಂಗಳು ಪ್ರಧಾನಿ, 16 ತಿಂಗಳು ಸಿಎಂ ಆಗಿದ್ದವರು. ನರ್ಮದಾ ನದಿ ಪೂರ್ತಿ ಮಾಡಿದ್ದವರು ದೇವೇಗೌಡರು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾ ದೇಶದ ನೀರಿನ ಸಮಸ್ಯೆ ಬಗೆಹರಿಸಿದ್ದವರು ದೇವೇಗೌಡರು. ಬಾಂಗ್ಲಾದಲ್ಲಿ ಈಗಲೂ ದೇವೇಗೌಡ ಅವರ ಫೋಟೋ ಇಟ್ಟುಕೊಂಡಿದ್ದಾರೆ. ಹೆಚ್ ಡಿ ದೇವೇಗೌಡ ಅವರ ದಾಖಲೆ ಇಲ್ಲಿದೆ ಎಂದಿದ್ದಾರೆ.


