Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಐ.ಆರ್ ಮೂಲಕ ಮತಗಳ್ಳತನ ರಾಷ್ಟ್ರದ್ರೋಹದ ಕೆಲಸ: ಡಾ. ದಾದಾಪೀರ್ ಆಕ್ರೋಶ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 10 : ಕೇಂದ್ರ ಚುನಾವಣಾ ಆಯೋಗ, ಬಿಜೆಪಿ ಸೇರಿಕೊಂಡು ಎಸ್.ಐ.ಆರ್.ಮೂಲಕ ಮತಗಳ್ಳತನ ಮಾಡುತ್ತಿರುವುದು ರಾಷ್ಟ್ರ ದ್ರೋಹದ ಕೆಲಸ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ಅಸಮಾಧಾನ ವ್ಯಕ್ತಪಡಿಸಿದರು.

ಎಸ್.ಐ.ಆರ್.ವಿರುದ್ದ ಹೋರಾಡುತ್ತಿರುವ ರಾಹುಲ್‍ಗಾಂಧಿಯನ್ನು ಬಂಧಿಸಿರುವುದರ ವಿರುದ್ದ ಮೊಳಕಾಲ್ಮುರು ಪಟ್ಟಣದಲ್ಲಿ ಶುಕ್ರವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ನಂತರ ಮಾತನಾಡಿದ ಡಾ.ದಾದಾಪೀರ್ ಎಸ್.ಐ.ಆರ್.ಮೂಲಕ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಎಸ್.ಐ.ಆರ್. ಹೆಸರಿನಲ್ಲಿ ಕೇಂದ್ರ ಸರ್ಕಾರ ಮತಗಳನ್ನು ಡಿಲೀಟ್ ಮಾಡಲು ಹೊರಟಿದೆ. ಇದು ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಕಸಿದುಕೊಂಡಂತೆ. ಚೀಪ್ ಎಲೆಕ್ಷನ್ ಕಮಿಷನರ್ ಜ್ಞಾನೇಶ್‍ಕುಮಾರ್‍ಗೆ ಚುನಾವಣಾ ಆಯೋಗದ ಇಬ್ಬರು ಆಯುಕ್ತರು ಹತ್ತು ತಿಂಗಳಲ್ಲಿ ಹದಿನಾಲ್ಕು ಆಕ್ಷೇಪಣೆಗಳನ್ನು ಸಲ್ಲಿಸಿ ಏಕ ಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ನೈಜ ಮತದಾರರು ಚುನಾವಣೆಯಲ್ಲಿ ಮತದಾನದಿಂದ ವಂಚಿತರಾಗುತ್ತಾರೆ. ಹಾಗಾಗಿ ಎಸ್.ಐ.ಆರ್.ನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಜಂತರ್‍ಮಂತರ್‍ನಲ್ಲಿ ನಡೆದ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದ ರಾಹುಲ್‍ಗಾಂಧಿಯನ್ನು ಬಂಧಿಸಿ ಸಂವಿಧಾನಕ್ಕೆ ಅಪಮಾನ ಮಾಡಲಾಯಿತು.
ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರ ತಮ್ಮ ನಡೆಯನ್ನು ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆಂದು ಡಾ.ದಾದಾಪೀರ್ ಎಚ್ಚರಿಸಿದರು.

ಮೊಳಕಾಲ್ಮುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್, ಕಾಂಗ್ರೆಸ್ ಮುಖಂಡ ವಿಜಯಣ್ಣ, ಮೊಳಕಾಲ್ಮುರು ಯುವ ಕಾಂಗ್ರೆಸ್ ಅಧ್ಯಕ್ಷ ಧನಂಜಯ, ಬ್ಲಾಕ್ ಅಧ್ಯಕ್ಷ ಪವನ್ ಜಿ. ಗೋಪಾಲ್, ಯುವ ಕಾಂಗ್ರೆಸ್ ಮುಖಂಡ ವಿಶ್ವಸಾಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುಬೇರ್, ಮೊಹಮದ್ ಭಾಷಾ, ಅಸೆಂಬ್ಲಿ ಉಪಾಧ್ಯಕ್ಷ ಮುಸ್ತಾಕ್, ನಾಗರಾಜ್, ಸುರೇಶ್, ಸೋಮಶೇಖರ್ ಜಿ. ಸದ್ದಾಂ, ಸಾಧಿಕ್, ಶಾಂತಕುಮಾರ್, ಶ್ರೀನಿವಾಸ, ಪವನ್, ಉಮೇಶ, ಗುರುಪ್ರಸಾದ್, ಪೂಜಾರಿ ಓಬಯ್ಯ, ಗುರು ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now