Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ವಿಮಾನದಲ್ಲಿ ಹೊತ್ತಿ ಉರಿದ ಪವರ್ ಬ್ಯಾಂಕ್: ಹೈದರಾಬಾದ್‌ನಲ್ಲಿ ಇಂಡಿಗೋ ವಿಮಾನ ತುರ್ತು ಲ್ಯಾಂಡಿಂಗ್

---Advertisement---

ಹೈದರಾಬಾದ್: ದೆಹಲಿಯಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಮಾನವನ್ನು ಹೈದರಾಬಾದ್‌ನ ಶಂಶಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರ ಬಳಿಯಿದ್ದ ಪವರ್ ಬ್ಯಾಂಕ್‌ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಎಚ್ಚೆತ್ತ ವಿಮಾನ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್‌ಗಳು ವಿಮಾನವನ್ನು ಶಂಶಾಬಾದ್ ವಿಮಾನ ನಿಲ್ದಾಣದತ್ತ ತಿರುಗಿಸಿ, ಸುರಕ್ಷಿತವಾಗಿ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಸಂಭಾವ್ಯ ಭಾರೀ ಅನಾಹುತ ತಪ್ಪಿದ್ದು, ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

Join WhatsApp

Join Now

Join Telegram

Join Now