ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಅ. 12 : ಬಿಜೆಪಿ ಸರ್ಕಾರದ ನೀತಿಗಳು ಮತ್ತು ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ರಾಷ್ಟ್ರಪತಿಗಳು ಮಧ್ಯಪ್ರವೇ ಶಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಹೆಚ್. ಆಂಜನೇಯ ಒತ್ತಾಯಿಸಿದ್ದಾರೆ.
ಮತದಾರನ ಪ್ರಾಥಮಿಕ ಹಕ್ಕುಗಳಲ್ಲೊಂದಾದ ಮತದಾನ ಹಕ್ಕನ್ನು ನಾಶಪಡಿಸುವ ಹುನ್ನಾರದೊಂದಿಗೆ ಬಿಜೆಪಿ ಕಾರ್ಯಕರ್ತರು ನಕಲಿ ಫಾರ್ಮ್ ನಂ-7ನ್ನು ತಯಾರಿಸಿ, ನೈಜ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಬಿ.ಎಲ್.ಒಗಳಿಗೆ ಒತ್ತಾಯಿಸುತ್ತಾಯಿಸುತ್ತಿರುವುದನ್ನು ತೀವ್ರವಾಗಿ ಖಂಡಿಸಿ ಚಿತ್ರದುರ್ಗ ಜಿಲ್ಲೆಯಲ್ಲಿ “ಓಟ್‍ಬಚಾವ್-ದೇಶ್‍ಬಚಾವ್-ಮತ ಉಳಿಸಿ-ದೇಶ ಉಳಿಸಿ”ಅಭಿಯಾನದಡಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಷ್ಟ್ರಪತಿಯವರು ಮಧ್ಯಪ್ರವೇಶಿಸಿ, ಎಲ್ಲ ಅಕ್ರಮಗಳನ್ನು ಬಹಿರಂಗಪಡಿಸಲು ಸುಪ್ರೀಂ ಕೋರ್ಟ್‍ಗೆ ಸೂಚನೆ ನೀಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಬಿಜೆಪಿಯ ಏಜೆಂಟರಂತೆ ಕೆಲಸ ಮಾಡುತ್ತಿರುವ ಜ್ಞಾನೇಶ್ ಕುಮಾರ್ ಸೇರಿದಂತೆ ಇತರೆ ವ್ಯಕ್ತಿಗಳನ್ನು ಕೂಡಲೇ ಜೈಲಿಗಟ್ಟಬೇಕು ಮತ್ತು ಈ ಮೂಲಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ರಾಷ್ಟ್ರಪತಿಗಳು ಮಾಡಬೇಕಾಗುತ್ತದೆ ಎಂದು ಮನವಿ ಮಾಡಿದರು.

ಪ್ರಧಾನಮಂತ್ರಿ ಮತ್ತು ಗೃಹಮಂತ್ರಿಗಳ ನಿರ್ದೇಶನದ ಮೇರೆಗೆ ಇಂತಹ ಒಳಸಂಚುಗಳನ್ನು ರೂಪಿಸಿ ಈ ರೀತಿ ಮಾಡಲಾಗುತ್ತಿದೆ ಇಂತಹ ಯಾವುದೇ ಅಕ್ರಮಗಳು ಪ್ರಜಾಪ್ರಭುತ್ವದ ವಿರೋಧಿ ಕಾನೂನು ಮತ್ತು ಸಂವಿಧಾನ ವಿರೋಧಿಯಾಗಿದೆ ನೈಜ ಮತದಾರರಾದ ಕಾಂಗ್ರೆಸ್‍ಗೆ ಮತ ನೀಡುವ ಸಾಂಪ್ರದಾಯಿಕ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ವ್ಯವಸ್ಥಿತ ಕೆಲಸ ನಡೆಯುತ್ತಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಚ್ಚೆತ್ತುಕೊಂಡು, ಮತದಾರರ ಪಟ್ಟಿಯನ್ನು ಪರಿಶೀಲಿಸಿ ಪ್ರತಿಯೊಬ್ಬರ ಹಕ್ಕನ್ನು ರಕ್ಷಿಸುವ ಕಾವಲುಗಾರರಾಗಬೇಕು ಎಂದು ಕರೆ ನೀಡಿದರು.
ದೇಶದಲ್ಲಿ ಸ್ವಾತಂತ್ರ್ಯ ತಂದುಕೊಟ್ಟವರು ಹಾಗೂ ಸಂವಿಧಾನವನ್ನು ಜಾರಿಗೆ ತಂದವರು ಕಾಂಗ್ರೆಸ್ ಪಕ್ಷದವರಾಗಿದ್ದು, ದೇಶದ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳನ್ನು ಉಳಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಬೂತ್ ಮಟ್ಟದಲ್ಲಿ ಜಾಗೃತರಾಗಿರಬೇಕು ಹಾಗೂ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ನಡೆಸಿ ಸಂವಿಧಾನದ ರಕ್ಷಣೆಗಾಗಿ ಒಗ್ಗಟ್ಟಿನಿಂದ ಹೋರಾಡಬೇಕು ಅಂಜನೇಯ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಚಿತ್ರದುರ್ಗ ನಗರಾಭಿವೃಧ್ಧಿ ಪ್ರಾಧಿಕಾರದ ಅದ್ಯಕ್ಷರಾದ ಎಂ.ಕೆ.ತಾಜ್‍ಪೀರ್ ಮಾತನಾಡಿ, ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಹಾಗೂ ಅಕ್ರಮವಾಗಿ ಕೈಬಿಡಲಾಗುತ್ತಿದೆ ಬಿಜೆಪಿ ಹಾಗೂ ಎನ್‍ಡಿಎ ಪಕ್ಷಗಳ ವಿರುದ್ಧ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ಭಾರತೀಯ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡುವ ಮೂಲಭೂತ ಅಧಿಕಾರವನ್ನು ನೀಡಿದೆ. ರಾಜೀವ್ ಗಾಂಧಿಯವರು ಪ್ರಧಾನಮಂತ್ರಿಯಾಗಿದ್ದ ಅವಧಿಯಲ್ಲಿ, ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಮತದಾನದ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿ ಯುವ ಜನರಿಗೆ ಹಕ್ಕು ಕಲ್ಪಿಸಲಾಯಿತು ಆದರೆ, ಇತ್ತೀಚಿನ ದಿನಗಳಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಎನ್‍ಡಿಎ ಮೈತ್ರಿಕೂಟದ ಪಕ್ಷಗಳು ಚುನಾವಣಾ ಆಯೋಗದ ಮೂಲಕ ಈ ಹಕ್ಕನ್ನು ಕಸಿದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿದರು.

ದೇಶದ ವಿವಿಧ ರಾಜ್ಯಗಳಲ್ಲಿ ಸುಮಾರು 10 ಕೋಟಿ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಕ್ರಮವಾಗಿ ಕೈಬಿಡಲಾಗಿದೆ ಕರ್ನಾಟಕದಲ್ಲೂ ಸಹ ಇಂತಹ ಅನ್ಯಾಯಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ, ಕಾಂಗ್ರೆಸ್ ಸರ್ಕಾರದ ಮುಖಂಡರು ಮತ್ತು ಕಾರ್ಯಕರ್ತರು ಇತ್ತೀಚೆಗೆ ಸುಮಾರು 5 ಕೋಟಿ ಜನರ ಮತದಾರರ ಹಕ್ಕನ್ನು ರಕ್ಷಿಸಲು ಹೋರಾಟ ನಡೆಸಿದ್ದಾರೆ. ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರು ಕೆಲವು ಕಡೆಗಳಲ್ಲಿ ದುರುದ್ದೇಶಪೂರ್ವಕವಾಗಿ, ಅಮಾಯಕರ ಹಾಗೂ ಪ್ರಮುಖ ವ್ಯಕ್ತಿಗಳ ಸಹಿಯನ್ನು ನಕಲಿ ಮಾಡಿ (ಫಾರ್ಮ್ 7) ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲೀಟ್ ಮಾಡಲು ಅರ್ಜಿ ಸಲ್ಲಿಸಿದ್ದಾರೆ ಎಂದು ದೂರಿದರು.
ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ ನಡೆಸಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ್ದಾಗಿದೆ. ಆದರೆ ಪ್ರಸ್ತುತ ಚುನಾವಣಾ ಆಯೋಗವು ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಆಡಳಿತ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಖಂಡಿಸಿ ಮತದಾರರ ಪಟ್ಟಿಯಲ್ಲಿ ಕಣ್ಣುಮುಚ್ಚಿ ನಕಲಿ ಸಹಿಗಳನ್ನು ಪಡೆದು ಲಕ್ಷಾಂತರ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಯತ್ನಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ಅರೆಸ್ಟ್ ಮಾಡಬೇಕು. ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರು ಈ ಅಕ್ರಮಗಳ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಯೊಬ್ಬರೂ ಒಟ್ಟಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಂಡು, ಮತದಾನದ ಹಕ್ಕಿಗಾಗಿ ಹೋರಾಟ ಮುಂದುವರಿಸಬೇಕು ಎಂದು ಕರೆ ನೀಡಿದರು.
ನಗರಾಭೀವೃದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಆರ್.ಕೆ.ಸರ್ದಾರ್ ಮಾತನಾಡಿ, ದೇಶದಲ್ಲಿ ನಡೆಯುತ್ತಿರುವ ಮತಕಳ್ಳತನ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥಿತ ಕಗ್ಗೊಲೆಯಾಗುತ್ತಿದೆ, ಮತದಾರರ ಪಟ್ಟಿಯಲ್ಲಿ ಎಸ್‍ಐಆರ್ ಮಾಡುತ್ತಿರುವ ಪ್ರಕ್ರಿಯೆಯೇ ಮೂಲ ಕಾರಣವಾಗಿದ್ದು, ಮತದಾರರಿಗೆ ಹಾಗೂ ಸಂವಿಧಾನಕ್ಕೆ ವಂಚನೆ ಎಸಗಲಾಗುತ್ತಿದೆ ಎಂದು ಆರೋಪಿಸಿ ದೇಶದಲ್ಲಿ ಮತಕಳ್ಳತನ ಹಾಗೂ ಪ್ರಜಾಪ್ರಭುತ್ವದ ಕೊಲೆ ನಿರಂತರವಾಗಿ ಆಗುತ್ತಿದ್ದು, ಇದನ್ನು ವಿರೋಧಿಸಿ ಈ ಹೋರಾಟವನ್ನು ಮುಂದುವರಿಸಲಾಗಿದೆ. ಬಿಜೆಪಿ ಸರ್ಕಾರವು ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಂಡು, ಅಡ್ಡಹಾದಿಯ ಮೂಲಕ ಚುನಾವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ಹಾಗೂ ಆಯೋಗದ ಮುಖ್ಯಸ್ಥರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಮತದಾರರ ಹಾಗೂ ಸಂವಿಧಾನದ ಹಕ್ಕುಗಳನ್ನು ಉಳಿಸಿಕೊಳ್ಳಲು ಮತದಾರರಿಗೆ ಆಗಿರುವ ಅನ್ಯಾಯದ ವಿರುದ್ಧ ನಾವೆಲ್ಲರೂ ಜಾಗೃತರಾಗಿ ಹೋರಾಡಬೇಕಾಗಿದೆ. ಬಿಜೆಪಿ ಮಾಡುತ್ತಿರುವ ಕುತಂತ್ರಗಳನ್ನು ಮತ್ತು ಅಧಿಕಾರಸ್ಥರ ತಪ್ಪುದಾರಿಗೆಳೆಯುವ ಕ್ರಮಗಳನ್ನು ವಿರೋಧಿಸುವುದಾಗಿ ತಿಳಿಸಿ ಮುಂದಿನ ದಿನಗಳಲ್ಲಿಯೂ ಈ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಎಚ್ಚರಿಸಿ ಮತದಾರರ ಹಕ್ಕುಗಳ ರಕ್ಷಣೆಗಾಗಿ ಹಾಗೂ ಚುನಾವಣಾ ಆಯೋಗದ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದವತಿಯಿಂದ ತೀವ್ರ ಹೋರಾಟವನ್ನು ಹಮ್ಮಿಕೊಳ್ಳಲಾಗಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಒಂದಾಗಿ ಹೋರಾಡಬೇಕೆಂದು ಕರೆ ನೀಡಿದರು.
ಕೆಪಿಸಿಸಿ, ಪ್ರಧಾನ ಕಾರ್ಯದರ್ಶಿ ಹನುಮಲಿ ಷÀಣ್ಮುಖಪ್ಪ ಮಾತನಾಡಿ, ದೇಶಾದ್ಯಂತ ವೋಟ್ ಚೋರಿ ವಿರುದ್ಧ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಸಾಂಕೇತಿಕವಾಗಿ ಸಿದ್ಧವಾಗುತ್ತಿದ್ದರೂ ಸಹ, ದೇಶಾದ್ಯಂತ ಈ ವೋಟ್ ಚೋರಿ ವಿರುದ್ಧ ನಾವು ಸತ್ಯಾಗ್ರಹ ಮಾಡುತ್ತಿದ್ದೇವೆ ಈ ವೋಟ್ ಚೋರಿಗೆ ಕಾರಣಕರ್ತರಾದ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಮತ್ತು ಅವರಿಗೆ ಪ್ರೇರಣೆ ನೀಡಿರುವ ಪ್ರಧಾನಮಂತ್ರಿಗಳು ಹಾಗೂ ಅಮಿತ್ ಶಾ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಇದ್ಕಕೂ ಮುನ್ನಾ ಈ ಪ್ರತಿಭಟನಾ ಮೆರವಣಿಗೆಯು ಚಿತ್ರದುರ್ಗ ನಗರದ ಗಾಂಧಿ ವೃತ್ತದಿಂದ ಆರಂಭಿಸಿ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹೊರಟು ಓನಕೆ ಒಬವ್ವ ವೃತ್ತದಲ್ಲಿ ಬಹಿರಂಗ ಸಭೇಯನ್ನು ನಡೆಸಲಾ ಯಿತು.
ಡಿಸಿಸಿ ಕಾರ್ಯಾಧ್ಯಕ್ಷರಾದ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮೈಲಾರಪ್ಪ, ಗ್ಯಾರಂಟಿ ಯೋಜನೆಗಳ ಅನುಷÁ್ಠನ ಪ್ರಾಧಿಕಾರ ಅದ್ಯಕ್ಷರಾದ ಆರ್. ಶಿವಣ್ಣ ತಾಲ್ಲೂಕು ಅಧ್ಯಕ್ಷರಾದ ಪ್ರಕಾಶ್ ಸದಸ್ಯರಾದ ನಜ್ಮಾತಾಜ್, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬಿ. ಟಿ. ಜಗದೀಶ್, ಮುನಿರಾ ಮಕಾಂದರ್, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಉಲ್ಲಾಸ್ ಕಾರೇಹಳ್ಳಿ, ಮರುಳಾರಾಧ್ಯ, ಜಾಕಿರ್ ಹುಸೇನ್, ಚೋಟು, ಮಧುಗೌಡ, ಕುಮಾರಗೌಡ, ರಾಮನಾಯ್ಕ್, ಖುದ್ದುಸ್, ಆನಂತಕುಮಾರ್, ತಿಪ್ಪೇಸ್ವಾಮಿ ಸೇರಿದಂತೆ ಇತರರು ಭಾಗವಹಿಸಿದ್ದರು.











