ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಅ. 12 : ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಎಲ್ಲಾ ಪಕ್ಷಗಳ ಮುಖಂಡರು ಒಗ್ಗೂಡಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ವೈಯಕ್ತಿಕ ಗೌಪ್ಯತೆಗೆ ಧಕ್ಕೆ ತರುವಂತಹ ಅನಧಿಕೃತ ಚಟುವಟಿಕೆಗಳಿಗೆ ತಡೆ ಹಾಕಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಸಚಿವರಾದ ಹೆಚ್. ಆಂಜನೇಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಚಿತ್ರದುರ್ಗ ನಗರದಲ್ಲಿ ತಮ್ಮನ್ನು ಬೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವೈಯಕ್ತಿಕ ಸಂಭಾಷಣೆಗಳನ್ನು ಕದ್ದು, ಆಲಿಸಿ, ರೆಕಾರ್ಡ್ ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ. ಇದಕ್ಕೆ ಎಲ್ಲಾ ಪಕ್ಷಗಳೂ ಸೇರಿ ಕಡಿವಾಣ ಹಾಕಬೇಕು ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲಾಗಿದೆ ಎಂದು ಹೇಳಲಾಗುತ್ತಿದ್ದು, ಯಾರು ತಪ್ಪು ಮಾಡಿದರೂ ಅವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು ಎಂದು ತಿಳಿಸಿ ಅಂತಹ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಕೂಡಲೇ ವಜಾಗೊಳಿಸಬೇಕು ಹಾಗೂ ಅವರಿಗೆ ದೇಶದಲ್ಲಿ ಎಲ್ಲೂ ಕೂಡ ಸ್ಥಾನಮಾನ ನೀಡಬಾರದು ಎಂದು ಅವರು. ಈ ರೀತಿಯ ಕೃತ್ಯಗಳು ಪ್ರಜಾಪ್ರಭುತ್ವದ ವಿರುದ್ಧ ಹಾಗೂ ಸಂವಿಧಾನಾತ್ಮಕ ತತ್ವಗಳಿಗೆ ವಿರೋಧವಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಂಸದ ಗೋವಿಂದಕಾರಜೋಳರಂತಹವರಿಗೆ ಭಾರತದ ಇತಿಹಾಸ ತಿಳಿದಿಲ್ಲ. ಬ್ರಿಟಿಷರ ಆಳ್ವಿಕೆಯನ್ನು ಅಂತ್ಯ ಗೊಳಿಸಲು ಮತ್ತು ದೇಶದ ಗುಲಾಮಗಿರಿಯನ್ನು ಬಿಡುಗಡೆ ಮಾಡಲು ಹೋರಾಡಿದ ಕುಟುಂಬದಿಂದ ಬಂದಿರುವ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವವನ್ನು ಉಳಿಸಲು ಶ್ರಮಿಸುತ್ತಿದ್ದಾರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹೊರತುಪಡಿಸಿ ಅಧಿಕಾರದ ಆಸೆಗಾಗಿ ಬೇರೆಯವರಿಗೆ ದಾರಿ ಮಾಡಿಕೊಟ್ಟ ತ್ಯಾಗಿಗಳು ಇಡೀ ಪ್ರಪಂಚದಲ್ಲೇ ಇದ್ದರೆ ಅದು ಕಾಂಗ್ರೆಸ್ನಲ್ಲಿದ್ದಾರೆ ಎಂದು ತಿಳಿಸಲಾಗಿದೆ.ತುರ್ತು ಪರಿಸ್ಥಿತಿಯನ್ನು ವಿರೋಧಿಸುತ್ತಿ ದ್ದವರು ಇಂದು ಜನರ ಭಾವನೆಗಳನ್ನು ವ್ಯಕ್ತಪಡಿಸಲು ಇರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದ್ದಾರೆ. ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಇಂತಹ ವ್ಯವಸ್ಥಿತ ಸಂಚುಗಳು ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಲಾಗಿದೆ.
ಕೆಲವು ಪಕ್ಷಗಳು ತಮ್ಮ ಕಾರ್ಯಕರ್ತರ ಸಂಖ್ಯೆಯನ್ನು ಕಡಿಮೆ ಮಾಡಿಕೊಂಡು ಗೆಲುವು ಸಾಧಿಸಲು ಅಡ್ಡದಾರಿ ಹಿಡಿದಿವೆ. ಕಾಂಗ್ರೆಸ್ ಎಲ್ಲೆಡೆ ಹೊಂದಿರುವ ಸಾಂಪ್ರದಾಯಿಕ ಮತದಾರರ ಸಂಖ್ಯೆಯನ್ನು ಕಡಿಮೆ ಮಾಡಬೇಕು ಎಂಬ ದುರುದ್ದೇಶದಿಂದ ಎಸ್.ಐ.ಆರ್. ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಂಜನೇಯ ಆಗ್ರಹಿಸಿದರು.










