Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ: ‘ಅನ್ನಸೇವೆ’ ಆ್ಯಪ್ ಮೂಲಕ ಮೊಬೈಲ್‌ನಲ್ಲೇ ಅಪ್ಡೇಟ್ ಮಾಡಲು ಅವಕಾಶ

---Advertisement---

ಚಿತ್ರದುರ್ಗ. ಅ.14: ಪಡಿತರ ಚೀಟಿ ಹೊಂದಿರುವವರು ಸ್ವಯಂ ಇ-ಕೆವೈಸಿ ದಾಖಲಿಸಲು ಆಹಾರ ಇಲಾಖೆಯು ಅನ್ನಸೇವೆ ಆ್ಯಪ್ ಮೂಲಕ ಇ-ಕೆವೈಸಿ ಪಡೆದುಕೊಳ್ಳುವ ಸೌಲಭ್ಯವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ.
ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿದಾರರ ಕುಟುಂಬದ ಎಲ್ಲ ಸದಸ್ಯರು, ಈಗಾಗಲೇ ಇ-ಕೆವೈಸಿ ಮಾಡಿಸಿ 5 ವರ್ಷ ಪೂರ್ಣಗೊಂಡಿದ್ದಲ್ಲಿ ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಅಥವಾ ‘ಅನ್ನಸೇವೆ’ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ಕಳೆದ ಸೆಪ್ಟೆಂಬರ್ ಮಾಹೆಯ 1ನೇ ತಾರೀಖಿನಿಂದ ಇಲ್ಲಿಯವರೆಗೆ ಒಟ್ಟು 8,94,600 ಫಲಾನುಭವಿಗಳಲ್ಲಿ, ಅಕ್ಟೋಬರ್ 13ರವರೆಗೆ 6,77,293 ಅಂದರೆ ಶೇ.75.70ರಷ್ಟು ಫಲಾನುಭವಿಗಳ ಇ-ಕೆವೈಸಿ ಪೂರ್ಣಗೊಂಡಿದೆ. ಆದರೆ, ಇನ್ನೂ ಒಟ್ಟು 2,17,307 ಫಲಾನುಭವಿಗಳ ಇ-ಕೆವೈಸಿ ಕಾರ್ಯ ಬಾಕಿ ಉಳಿದಿದೆ.
‘ಅನ್ನಸೇವೆ’ ಆ್ಯಪ್ ಮೂಲಕ ಇ-ಕೆವೈಸಿ ಮಾಡಿಕೊಳ್ಳುವ ವಿಧಾನ: ಫಲಾನುಭವಿಗಳು ‘ಅನ್ನಸೇವೆ’ ಆ್ಯಪ್ ಮೂಲಕ ತಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ರೇಷನ್ ಕಾರ್ಡ್ ನಂಬರ್ ಹಾಗೂ ರೇಷನ್ ಕಾರ್ಡ್‍ಗೆ ಲಿಂಕ್ ಮಾಡಿರುವ ಮೊಬೈಲ್ ನಂಬರ್ ನಮೂದಿಸಿ ಒಟಿಪಿ ಪಡೆದು ಲಾಗಿನ್ ಆಗಬೇಕು. ಕುಟುಂಬದ ಸದಸ್ಯರ ಪಟ್ಟಿ ತೆರೆದುಕೊಂಡ ಬಳಿಕ, ಯಾರ ಇ-ಕೆವೈಸಿ ಬಾಕಿ ಇದೆಯೋ ಅವರ ಹೆಸರಿನ ಮೇಲೆ ಕ್ಲಿಕ್ ಮಾಡಿ ಆಪ್‍ಗಳ ಸಹಾಯದಿಂದ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಇ-ಕೆವೈಸಿ ಮಾಡಿಸದೆ ಹೋದರೆ ಅಂತಹ ಪಡಿತರ ಚೀಟಿಯ ಫಲಾನುಭವಿಗಳು ಸರ್ಕಾರದ ಸೌಲಭ್ಯದಿಂದ ವಂಚಿತರಾಗಬಹುದು. ಆದ್ದರಿಂದ ಬಾಕಿ ಇರುವ 2,17,307 ಪಡಿತರ ಚೀಟಿದಾರರ ಫಲಾನುಭವಿಗಳು ಕೂಡಲೇ ಇ-ಕೆವೈಸಿ ಮಾಡಿಸಿಕೊಂಡು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now