Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಸಮಾಜ ಸೇವಕ, ಶಿಕ್ಷಣ ಪ್ರೇಮಿ ಡಾ. ಕೆ.ಎಂ. ವೀರೇಶ್ ಸ್ಮರಣಾರ್ಥ ನಾಳೆ ‘ನುಡಿ ನಮನ’ ಕಾರ್ಯಕ್ರಮ

---Advertisement---

ಸುದ್ದಿಒನ್,  ಚಿತ್ರದುರ್ಗ, ಅಕ್ಟೋಬರ್. 15  : ನಗರದ ಶ್ರೀ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ವೀರಶೈವ ಸಮಾಜ ಹಾಗೂ ಜಿಲ್ಲಾ ಜಂಗಮ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 16 ರ ಶುಕ್ರವಾರ ಬೆಳಗ್ಗೆ 10:30ಕ್ಕೆ ಶಿಕ್ಷಣ ಪ್ರೇಮಿ ಸಮಾಜ ಸೇವಕರು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ಡಾ. ಕೆ.ಎಂ ವೀರೇಶ್ ಇವರಿಗೆ ನುಡಿ ನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹೆಬ್ಬಾಳು ವಿರಕ್ತಮಠದ ಪರಮಪೂಜ್ಯ ಮಹಾಂತ ರುದ್ರೇಶ್ವರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಜಂಗಮ ಸಮಾಜದ ಅಧ್ಯಕ್ಷರಾದ ಎಂ.ಟಿ ಮಲ್ಲಿಕಾರ್ಜುನಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಎಸ್.ಕೆ ಬಸವರಾಜನ್, ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್ ತಿಪ್ಪೇಸ್ವಾಮಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಸಾಮಾಜಿಕ ಕ್ಷೇತ್ರ ಕುರಿತು ನಿವೃತ್ತ ಪ್ರೌಢಶಾಲಾ ಶಿಕ್ಷಕ ಹಾಗೂ ಸಾಹಿತಿ ಹುರುಳಿ ಬಸವರಾಜ್, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರೊ. ಎಂ.ಕೆ ಪ್ರಭುದೇವ, ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇತಿಹಾಸ ಸಂಶೋಧಕ ಡಾ. ಬಿ ರಾಜಶೇಖರಪ್ಪ, ಸಾಂಸ್ಕೃತಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಂಗ ನಿರ್ದೇಶಕ ಕೆ.ಪಿ.ಎಂ ಗಣೇಶಯ್ಯ ಮುಂತಾದವರು ಡಾ.ಕೆ.ಎಂ ವೀರೇಶ್ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡುವರು. ಸ್ಥಳೀಯ ಕಲಾವಿದರು ವಚನ ಗಾಯನವನ್ನು ನೆರವೇರಿಸುವರು. ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆಯ ಸಮಸ್ತ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಜಿಲ್ಲಾ ಜಂಗಮ ಸಮಾಜದ ಕಾರ್ಯದರ್ಶಿ ಎಸ್.ಷಡಾಕ್ಷರಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವೃದ್ದಾಪ್ಯ ವೇತನ ಫಲಾನುಭವಿಗಳೇ ತಪ್ಪದೇ ಈ ಕೆಲಸ ಮಾಡಿ: ಇಲ್ಲದಿದ್ದರೆ ಸಿಗಲ್ಲ ಪಿಂಚಣಿ!

ಚಿತ್ರದುರ್ಗ : ಅ.23ಕ್ಕೆ ಆಗ್ನೇಯ ಪದವೀಧರರ ಚುನಾವಣೆ: ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ನಿರ್ದೇಶನ

ನೀವೂ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿರುವುದು ಗ್ಯಾರಂಟಿ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನಾನು ಮಾತಾಡೋಕೆ ನಿಂತ್ರೆ ಇನ್ನೊಂದು ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕು: ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲ: ಸುಪ್ರೀಂ ಕೋರ್ಟ್

ಚಿತ್ರದುರ್ಗ : ವಿದ್ಯಾ ವಿಕಾಸ ಅಕಾಡೆಮಿಯಲ್ಲಿ ಸಂಭ್ರಮದ ಗೊಂಬೆ ಪೂಜೆ: ಗಮನ ಸೆಳೆದ ಸಾಂಪ್ರದಾಯಿಕ ಪ್ರದರ್ಶನ