Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಶಾಲಾ ಕಟ್ಟಡದ ಛಾವಣಿ ಕುಸಿತ: ಓರ್ವ ಶಿಕ್ಷಕಿ, 28 ವಿದ್ಯಾರ್ಥಿಗಳು ಸಾವು

---Advertisement---

ಪೇಶಾವರ : ಪಾಕಿಸ್ತಾನದ ಪೇಶಾವರ ನಗರದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಶಾಲಾ ಕಟ್ಟಡದ ಛಾವಣಿ ಕುಸಿದು ಬಿದ್ದ ಪರಿಣಾಮ 28 ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕಿ ಸಾವನ್ನಪ್ಪಿದ್ದಾರೆ. ತರಗತಿಗಳು ನಡೆಯುತ್ತಿದ್ದ ಸಂದರ್ಭದಲ್ಲೇ ಈ ಘಟನೆ ನಡೆದಿದ್ದು, 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೇಶಾವರದ ದೀರ್ ಕಾಲೋನಿ ಪ್ರದೇಶದಲ್ಲಿರುವ ಶಾಲೆಯೊಂದರಲ್ಲಿ ಗುರುವಾರ ಎಂದಿನಂತೆ ತರಗತಿಗಳು ನಡೆಯುತ್ತಿದ್ದಾಗ ಏಕಾಏಕಿ ಮೇಲ್ಛಾವಣಿ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿ ಮಕ್ಕಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ಮಕ್ಕಳಲ್ಲಿ ಬಹುತೇಕರು 13 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಿವೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಲೇಡಿ ರೀಡಿಂಗ್ ಆಸ್ಪತ್ರೆ ಸೇರಿದಂತೆ ಪ್ರಮುಖ ವೈದ್ಯಕೀಯ ಕೇಂದ್ರಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅವಶೇಷಗಳ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ಮತ್ತಷ್ಟು ಮಂದಿ ಸಿಲುಕಿರುವ ಆತಂಕ ವ್ಯಕ್ತವಾಗಿದೆ.

ಕಳಪೆ ನಿರ್ಮಾಣ ಸಾಮಗ್ರಿಗಳ ಬಳಕೆ ಮತ್ತು ಕಳಪೆ ಭದ್ರತಾ ಮಾನದಂಡಗಳೇ ಪಾಕಿಸ್ತಾನದಲ್ಲಿ ಪದೇಪದೇ ಇಂತಹ ದುರಂತಗಳು ಸಂಭವಿಸಲು ಪ್ರಮುಖ ಕಾರಣವೆನ್ನಲಾಗಿದೆ. ಘಟನೆಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ.

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವೃದ್ದಾಪ್ಯ ವೇತನ ಫಲಾನುಭವಿಗಳೇ ತಪ್ಪದೇ ಈ ಕೆಲಸ ಮಾಡಿ: ಇಲ್ಲದಿದ್ದರೆ ಸಿಗಲ್ಲ ಪಿಂಚಣಿ!

ಚಿತ್ರದುರ್ಗ : ಅ.23ಕ್ಕೆ ಆಗ್ನೇಯ ಪದವೀಧರರ ಚುನಾವಣೆ: ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಡಳಿತ ನಿರ್ದೇಶನ

ನೀವೂ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿರುವುದು ಗ್ಯಾರಂಟಿ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನಾನು ಮಾತಾಡೋಕೆ ನಿಂತ್ರೆ ಇನ್ನೊಂದು ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕು: ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲ: ಸುಪ್ರೀಂ ಕೋರ್ಟ್

ಚಿತ್ರದುರ್ಗ : ವಿದ್ಯಾ ವಿಕಾಸ ಅಕಾಡೆಮಿಯಲ್ಲಿ ಸಂಭ್ರಮದ ಗೊಂಬೆ ಪೂಜೆ: ಗಮನ ಸೆಳೆದ ಸಾಂಪ್ರದಾಯಿಕ ಪ್ರದರ್ಶನ