Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾನು ಮಾತಾಡೋಕೆ ನಿಂತ್ರೆ ಇನ್ನೊಂದು ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕು: ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

---Advertisement---

ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕುರ್ಚಿ ಹಾಗೂ ವಯಸ್ಸಿಗೆ ಗೌರವ ಕೊಟ್ಟು ನಮಗೂ ಸಾಕಾಗಿದೆ. ನಾವೇನಾದರೂ ಮಾತನಾಡಲು ಶುರು ಮಾಡಿದರೆ ಅವರಿಗೆ ಇನ್ನೊಂದು ಓಪನ್ ಹಾರ್ಟ್ ಸರ್ಜರಿ ಆಗುತ್ತದೆ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬರೂ ತಮ್ಮ ಮಿತಿಯಲ್ಲಿ ಇರುವುದನ್ನು ಕಲಿಯಬೇಕು, ಎದುರಿನವರು ಯಾವ ಭಾಷೆಯಲ್ಲಿ ಮಾತನಾಡುತ್ತಾರೋ ಅದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಪ್ರಕರಣವೊಂದರ ತನಿಖೆ ಕುರಿತು ಎಚ್.ಡಿ. ಕುಮಾರಸ್ವಾಮಿ ಮಾಡುತ್ತಿರುವ ಆರೋಪಗಳಿಗೆ ಪ್ರತ್ಯುತ್ತರ ನೀಡಿರುವ ಅವರು, ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯಲ್ಲಿ ಹೆಸರುಗಳು ಬಂದವರನ್ನು ವಿಚಾರಣೆಗೆ ಕರೆಯಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಯಾರನ್ನು ಕರೆಯಬೇಕು ಎಂಬುದನ್ನು ಅವರೇ ಪಟ್ಟಿ ಮಾಡಿ ಕೊಡಬೇಕೇ ಎಂದು ಪ್ರಶ್ನಿಸಿರುವ ಸಚಿವರು, ಕುಮಾರಸ್ವಾಮಿ ಅವರಿಂದ ತನಿಖೆ ಹೇಗೆ ನಡೆಸಬೇಕು ಎಂದು ಕಲಿಯುವ ಅಗತ್ಯ ನನಗಿಲ್ಲ ಎಂದಿದ್ದಾರೆ. ಕುಮಾರಸ್ವಾಮಿ ಅವರು ದೂರುದಾರರೂ ಅಲ್ಲ, ಸಂತ್ರಸ್ತರೂ ಅಲ್ಲ; ಆದರೂ ಅವರ ಬಳಿ ಏನಾದರೂ ನಿರ್ದಿಷ್ಟ ಸಾಕ್ಷ್ಯಾಧಾರಗಳು ಇದ್ದರೆ ಅದನ್ನು ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಬಾಯಿಗೆ ಬಂದಂತೆ ಮಾತನಾಡುವುದು, ಏಕವಚನ ಬಳಸುವುದು ಹಾಗೂ ಕುಟುಂಬದ ಹಿರಿಯರ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಬೇಕು ಎಂದು ಕಿಡಿಕಾರಿದ್ದಾರೆ. ದಿನಕ್ಕೊಂದು ಪತ್ರಿಕಾಗೋಷ್ಠಿ ನಡೆಸಿ ಆ ಮಹಾನಾಯಕ ಯಾರು, ಫೈವ್ ಸ್ಟಾರ್ ಹೋಟೆಲ್‌ನಲ್ಲಿ ಕೂತಿದ್ದವರು ಯಾರು ಎಂದು ಗಾಳಿಯಲ್ಲಿ ಗುಂಡು ಹಾರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ತನಿಖೆ ಮುಕ್ತವಾಗಿ ನಡೆಯುತ್ತಿದ್ದು, ಯಾರೇ ತಪ್ಪಿತಸ್ಥರಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ. ನಾಲಿಗೆಯ ಮೇಲೆ ಹಿಡಿತವಿಟ್ಟುಕೊಂಡು ಜವಾಬ್ದಾರಿಯುತ ಸ್ಥಾನದಲ್ಲಿರುವಂತೆ ನಡೆದುಕೊಳ್ಳಬೇಕೆಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

Join WhatsApp

Join Now

Join Telegram

Join Now