ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 15 : ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ನಡೆಯುತ್ತಿರುವ ಸೂರಿಗಾಗಿ ಸಮರ ಅನಿರ್ಧಿಷ್ಟಾವಧಿ ಮುಷ್ಕರ ಗುರುವಾರ ಎಂಟನೆ ದಿನಕ್ಕೆ ಕಾಲಿಟ್ಟಿದೆ.
ಸ್ವಂತ ನಿವೇಶನ, ಮನೆಯಿಲ್ಲದ ಜಿಲ್ಲೆಯ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಗರಸಭೆಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಭೇಟಿಯಾಗಿ ಬಡವರಿಗೆ ಭೂಮಿ ಗುರುತಿಸಿ ನಿವೇಶನಗಳನ್ನು ವಿಂಗಡಿಸಿ ಮನೆಗಳನ್ನು ಕಟ್ಟಿಕೊಳ್ಳಲು ಹಣದ ನೆರವು ನೀಡುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಕಂದಾಯ ಭೂಮಿಯನ್ನು ಗುರುತಿಸಿ ಬಡವರಿಗೆ ಮನೆಗಳನ್ನು ಕಟ್ಟಿಸಿಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ ಕಾರ್ಯದರ್ಶಿ ಕಾಂ.ಜಾಫರ್ಷರೀಫ್ ಎಚ್ಚರಿಸಿದರು.
ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ ಸಂಘಟನಾ ಕಾರ್ಯದರ್ಶಿ ಕಾಂ.ಈ.ಸತ್ಯಕೀರ್ತಿ, ರಾಜ್ಯ ಸಮಿತಿ ಸದಸ್ಯರುಗಳಾದ ಲೇಪಾಕ್ಷಿ, ರೇಣುಕ ಹಾಗೂ ಶಿಲ್ಪ
ಭೂಮಿಕ, ಚಂದ್ರಕಲಾ, ಪ್ರಸನ್ನಕುಮಾರ್, ಬಾಬು, ವಿಠಲ, ತಿಪ್ಪೇಸ್ವಾಮಿ ಸೇರಿದಂತೆ ನೂರಾರು ಮಹಿಳೆಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.











