Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಜಿಲ್ಲೆಯಾದ್ಯಂತ ಅ. 21ರಿಂದ 23ರ ವರೆಗೆ ‘ಶುಷ್ಕ ದಿನ’ ಘೋಷಣೆ: ಮದ್ಯ ಮಾರಾಟ ನಿಷೇಧ

---Advertisement---

ಬಳ್ಳಾರಿ : ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾನದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಾದ್ಯಂತ ಅಕ್ಟೋಬರ್ 21ರಿಂದ 23ರ ಮಧ್ಯರಾತ್ರಿಯವರೆಗೆ ‘ಶುಷ್ಕ ದಿನ’ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶ ಹೊರಡಿಸಿದ್ದಾರೆ.

ಚುನಾವಣೆಯ ಮತದಾನವು ಅಕ್ಟೋಬರ್ 23ರಂದು ನಡೆಯಲಿದ್ದು, ಈ ಅವಧಿಯಲ್ಲಿ ಶಾಂತಿಯುತ ಹಾಗೂ ನ್ಯಾಯಸಮ್ಮತ ಮತದಾನ ನಡೆಸಲು ಮತ್ತು ಕಾನೂನು-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ ನಿಯಮಗಳು 1967ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

2026ರ ಅಕ್ಟೋಬರ್ 21ರ ಸಂಜೆ 04 ಗಂಟೆಯಿAದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಅಬಕಾರಿ ಸನ್ನದುಗಳನ್ನು (ವೈನ್ ಶಾಪ್, ಬಾರ್, ಪಬ್ ಇತ್ಯಾದಿ) ಮುಚ್ಚಲು ಆದೇಶಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ, ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now