ಬೆಂಗಳೂರು: ರಾಜ್ಯದ ವಿವಿಧ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪ್ರಸಕ್ತ ಸಾಲಿನ ಪಿಜಿಸಿಇಟಿ (PGCET) ಮೂಲಕ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಹಾಗೂ ಎಂ.ಆರ್ಕ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾದ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಐಎಎಸ್ ಅವರು ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
#PGCET-26: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ
ಸಂಬಂಧಿಸಿದಂತೆ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ.ಇದನ್ನು ಓದಿದಾವಣಗೆರೆ : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಅ.19ರೊಳಗೆ ಶುಲ್ಕ ಪಾವತಿಸಿ, ಅ.23ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.
– ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕ
ಕರ್ನಾಟಕ ಪರೀಕ್ಷಾ…— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) October 16, 2026
ಅಂತಿಮ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿದೆ. ಸೀಟು ಪಡೆದ ಅಭ್ಯರ್ಥಿಗಳು ಅಕ್ಟೋಬರ್ 19ರೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು ಹಾಗೂ ಅಕ್ಟೋಬರ್ 23ರೊಳಗೆ ಹಂಚಿಕೆಯಾದ ಕಾಲೇಜುಗಳಿಗೆ ಭೇಟಿ ನೀಡಿ ಅಗತ್ಯ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಲು ಸೂಚಿಸಲಾಗಿದೆ.












