Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಸೂಚನೆ

---Advertisement---

ದಾವಣಗೆರೆ :  ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಹೈಸ್ಕೂಲ್ ಮೈದಾನದಿಂದ ವಿವಿಧ ಕಲಾ ತಂಡಗಳೊಂದಿಗೆ ಭುವನೇಶ್ವರಿ ಮೂರ್ತಿ ಮೆರವಣಿಗೆ ಮತ್ತು ವೇದಿಕೆ ಕಾರ್ಯಕ್ರಮವನ್ನು ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿರುವ  ಬಯಲು ರಂಗಮಂದಿರದಲ್ಲಿ  ಆಚರಿಸಲು  ಸಕಲ ಸಿದ್ಧತೆಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ಸೂಚಿಸಿದರು.

ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ  ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಆಕರ್ಷಕ ಸ್ತಬ್ಧಚಿತ್ರಗಳನ್ನು  ಕೆಎಸ್ಆರ್‌ಟಿಸಿ ವತಿಯಿಂದ ವ್ಯವಸ್ಥೆ ಮಾಡಲು ಕ್ರಮವಹಿಸಬೇಕು, ಆಸಕ್ತರು ವೈಯಕ್ತಿಕವಾಗಿ ಆಟೋಗಳಲ್ಲಿ ಕನ್ನಡಕ್ಕೆ ಸಂಬಂಧಿಸಿದ ಮಹಾನೀಯರ ಫೋಟೋಗಳನ್ನು ಸ್ತಬ್ಧಚಿತ್ರಗಳ ಮೂಲಕ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುವುದು ಹಾಗೂ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಸರ್ಕಾರಿ ಕಟ್ಟಡಗಳಿಗೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗುವುದು ಎಂದರು.

 ವಿದ್ಯಾರ್ಥಿಗಳಲ್ಲಿ ಕನ್ನಡಾಭಿಮಾನ ಬೆಳೆಸಲು ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿ ಪ್ರತಿ ವಿಭಾಗದಿಂದ 5 ಬಹುಮಾನಗಳನ್ನು ನೀಡಲಾಗುವುದು ಎಂದರು.

ಕನ್ನಡ ಪರ ಸಂಘಟನೆಗಳ ಮುಖಂಡರುಗಳು ಮಾತನಾಡಿ, ನಗರದ ಪಿ.ಬಿ. ರಸ್ತೆಯಲ್ಲಿ ಜಿ.ಎಂ.ಐ.ಟಿ ಕಾಲೇಜಿನಿಂದ  ನಿಂದ  ಬಾಡ ಕ್ರಾಸ್ ರಸ್ತೆ ಹಾಗೂ ರೈಲ್ವೆ ನಿಲ್ದಾಣದಿಂದ ಹದಡಿ ರಸ್ತೆಯವರಿಗೆ ಸಂಪೂರ್ಣವಾಗಿ ಕೆಂಪು ಮತ್ತು ಹಳದಿ ಬಣ್ಣದ ಬಟ್ಟೆಗಳನ್ನು ಕಟ್ಟಿ ಕನ್ನಡ ರಾಜ್ಯೋತ್ಸವದ ವಾತಾವರಣವನ್ನು ಸೃಷ್ಟಿಸಬೇಕು  , 60 ವರ್ಷ ಪೂರ್ಣಗೊಂಡ ಹಿರಿಯ ರಂಗಭೂಮಿ, ಜಾನಪದ, ಸಂಗೀತ, ಸಮಾಜಸೇವೆ ಸಲ್ಲಿಸಿರುವರನ್ನು ಗುರುತಿಸಿ ಸನ್ಮಾನಿಸಬೇಕು ಎಂದರು  ಒಂದು ತಿಂಗಳುಗಳ ಕಾಲ ಜಿಲ್ಲೆಯ  ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರವನ್ನ ಪ್ರದರ್ಶಿಸುವಂತೆ ಆದೇಶಿಸಬೇಕು  ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯಲ್ಲಿರುವ ನಾಮಫಲಕಗಳ ಅಳವಡಿಕೆ ಪರಿಣಾಮಕಾರಿಯಾಗಿ ಪಾಲನೆಯಾಗುವಂತೆ ಸಭೆಗೆ ತಿಳಿಸಿದರು ಜಿಲ್ಲಾಧಿಕಾರಿಗಳು ಇದಕ್ಕೆ ಸಮ್ಮತಿ ಸೂಚಿಸಿದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು,ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಈ ಮೆರವಣಿಗೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್. ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಾಹಿತ್ಯ ಎಂ. ಆಲದಕಟ್ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್. ಎನ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now