ಬೆಂಗಳೂರು : ನವೆಂಬರ್ 1 (November 1) ರ ಭಾನುವಾರದಂದು 2026-27ನೇ ಸಾಲಿನ ಕನ್ನಡ ರಾಜ್ಯೋತ್ಸವ(Kannada Rajyotsava) ವನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಅಧಿಕೃತ ಸುತ್ತೋಲೆ ಹೊರಡಿಸಿದೆ.
2026ರ ನವೆಂಬರ್ 1 ರಂದು ಭಾನುವಾರ ಬಂದಿದ್ದರೂ ಸಹ, ಅಂದು ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನಾಡಹಬ್ಬವನ್ನು ಗೌರವಪೂರ್ವಕವಾಗಿ ಆಚರಿಸಲೇಬೇಕು ಎಂದು ಇಲಾಖೆ ಆದೇಶಿಸಿದೆ.
ಇಲಾಖಾ ಅಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ನಿರ್ದೇಶನ
ರಾಷ್ಟ್ರೀಯ ಹಬ್ಬಗಳು, ರಾಜ್ಯೋತ್ಸವ ಹಾಗೂ ಪ್ರಮುಖ ಜಯಂತಿಗಳನ್ನು ನಿಯಮಾನುಸಾರ ಆಯಾ ದಿನಗಳಂದೇ ಕಡ್ಡಾಯವಾಗಿ ಆಚರಿಸಲು ಈ ಹಿಂದೆಯೇ ಜ್ಞಾಪನ ಪತ್ರದ ಮೂಲಕ ಸೂಚಿಸಲಾಗಿತ್ತು.
ಇದೀಗ ಮತ್ತೊಮ್ಮೆ ಈ ಕುರಿತು ಸ್ಪಷ್ಟನೆ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು, ನವೆಂಬರ್ 1 ರಂದು ಯಾವುದೇ ಲೋಪವಿಲ್ಲದೆ ನಿಯಮಾನುಸಾರ ಆಚರಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.











