Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಹಾಡುಹಗಲೇ ವೃದ್ದೆಯ ಚಿನ್ನದ ಸರ ಕಿತ್ತುಕೊಂಡು ಕಳ್ಳ ಪರಾರಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ತ್ಯಾಗರಾಜ ಬೀದಿಯಲ್ಲಿನ ವಾಸವಿ ಸ್ಕೂಲ್ ಮುಂಭಾಗವಿರುವ ಶಂಕರನಾರಾಯಣ ದೇವಸ್ಥಾನದ ಬಳಿ ಅಪರಿಚಿತನೋರ್ವ ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಹಾಡುಹಗಲೆ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಧರ್ಮಶಾಲಾ ರಸ್ತೆಯ ನಿವಾಸಿ ಅಹಲ್ಯಬಾಯಿ ಪ್ರತಿನಿತ್ಯದಂತೆ ಶನಿವಾರ ಶಂಕರನಾರಾಯಣ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ದೇವಸ್ಥಾನವನ್ನು ಪ್ರದಕ್ಷಿಣೆ ಹಾಕುತ್ತಿದ್ದ ಸಮಯವನ್ನು ಹೊಂಚು ಹಾಕಿ ಕಾಯುತ್ತಿದ್ದ ಅಪರಿಚಿತ ಮಾಂಗಲ್ಯ ಸರ ಎಗರಿಸಿಕೊಂಡು ಓಟ ಕಿತ್ತಿದ್ದಾನೆ. ಈ ಸಂಬಂಧ ನಗರ ಪೊಲೀಸ್ ಠಾಣೆ ಅಪರಾಧ ವಿಭಾಗದಲ್ಲಿ ದೂರು ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now