Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಛಲವಾದಿ ಗುರುಪೀಠದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ನಗರದ ಹೊರ ವಲಯ ದಾವಣಗೆರೆ ರಸ್ತೆಯಲ್ಲಿರುವ ಛಲವಾದಿ ಗುರುಪೀಠದಲ್ಲಿ ಪ್ರತಿ ತಿಂಗಳು ಮೂರನೆ ಶನಿವಾರದಂದು ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದೆಂದು ಛಲವಾದಿ ಗುರುಪೀಠದ ಬಸವನಾಗಿದೇವಸ್ವಾಮಿ ತಿಳಿಸಿದರು.

ಆರೋಗ್ಯ ತಪಾಸಣೆಯುಳ್ಳ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಬಸವನಾಗಿದೇವಸ್ವಾಮೀಜಿ ರಕ್ತ ತಪಾಸಣೆ ಸೇರಿದಂತೆ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯದ ತೊಂದರೆ ಹೀಗೆ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬಸವೇಶ್ವರ ಆಸ್ಪತ್ರೆಯ ವೈದ್ಯರು, ಆಯುರ್ವೇದಿಕ್ ವೈದ್ಯರು ಹಾಗೂ ಯೋಗ ವನ ಬೆಟ್ಟದ ಪಾರಂಪರಿಕ ವೈದ್ಯರುಗಳು ತಪಾಸಣೆ ನಡೆಸಿ ಸೂಕ್ತ ಸಲಹೆ ನೀಡುತ್ತಾರೆ.
ಸಾರ್ವಜನಿಕರು ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದುಕೊಳ್ಳಬಹುದೆಂದು ಬಸವನಾಗಿದೇವಸ್ವಾಮಿ ಮನವಿ ಮಾಡಿದರು.

ಛಲವಾದಿ ಗುರುಪೀಠದ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಮಾತನಾಡಿ ಒತ್ತಡ ಬದುಕಿನಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುವುದು ಸಹಜ. ಇಂತಹ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸಿಕೊಂಡು ಏನಾದರೂ ಸಮಸ್ಯೆಗಳಿದ್ದರೆ ವೈದ್ಯರುಗಳು ನೀಡುವ ಸೂಚನೆಯಂತೆ ಚಿಕಿತ್ಸೆ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ವಿನಂತಿಸಿದರು. ನ್ಯಾಯವಾದಿ ಪರಮೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now