Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಕಲೆ ಜೀವಂತ: ಕಾಂಗ್ರೆಸ್ ಮುಖಂಡ ರೇಣುಕ ಶಿವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಯಾವುದೇ ರಂಗದಲ್ಲಾಗಲಿ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಕಲೆ ಜೀವಂತವಾಗಿರಲು ಸಾಧ್ಯ ಎಂದು ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಲೀಡರ್ ರೇಣುಕ ಶಿವು ತಿಳಿಸಿದರು.

ಬಾಪೂಜಿ ಕಂಪ್ಯುಟರ್ಸ್ ಹಾಗೂ ಸಿಂಗರ್ ಜೋನ್ ಸಹಯೋಗದೊಂದಿಗೆ ಅಮೋಘ ಇಂಟರ್ ನ್ಯಾಷನಲ್ ಹೋಟೆಲ್‍ನಲ್ಲಿ ಭಾನುವಾರ ನಡೆದ ಕರೋಕೆ ಸಿಂಗಿಂಗ್ ಇವೆಂಟ್‍ನಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲೆ ಬರಪೀಡಿತ ಪ್ರದೇಶವಾಗಿರಬಹುದು. ಆದರೆ ಕಲೆ, ಸಾಹಿತ್ಯ, ಜಾನಪದ, ನೃತ್ಯ, ಹಾಡುಗಾರಿಕೆಯಲ್ಲಿ ಶ್ರೀಮಂತಿಕೆಯನ್ನು ಹೊಂದಿದೆ. ಕಲಾವಿದರ ಬದುಕು ಕಷ್ಟ. ಕಲಾವಿದರು ತಮ್ಮ ಜೀವನವನ್ನು ಕಲೆಗೆ ಮೀಸಲಿಡುತ್ತಾರೆ. ಕಲಾವಿದರನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರೇಕ್ಷಕರುಗಳ ಮೇಲಿದೆ ಎಂದು ಹೇಳಿದರು. ಜೂನಿಯರ್ ರವಿಚಂದ್ರನ್, ಮಂಡ್ಯದ ರೂಪ, ವಿಜಯಪ್ರಕಾಶ್, ಶಿವರಾಜ್ ಇನ್ನು ಅನೇಕರು ಇವೆಂಟ್‍ನಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now