ಚಿತ್ರದುರ್ಗ. ಅ.19: ಕರ್ನಾಟಕ ಜಾನಪದ ಅಕಾಡೆಮಿಯ 2026-27ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯ ಕೋಲಾಟ ಕಲಾವಿದ ನರಸಪ್ಪ ಆಯ್ಕೆಯಾಗಿದ್ದಾರೆ.
ಚಳ್ಳಕೆರೆ ತಾಲ್ಲೂಕಿನ ಕಸವಿಗೊಂಡನಹಳ್ಳಿ ಗೊಲ್ಲರಹಟ್ಟಿಯ ನಿವಾಸಿಯಾಗಿರುವ ನರಸಪ್ಪ ಅವರು, ಜಾನಪದ ಕಲೆಯಾದ ಕೋಲಾಟವನ್ನು ಜೀವಂತವಾಗಿರಿಸುವಲ್ಲಿ ಮತ್ತು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಸಲ್ಲಿಸಿದ ಜೀವಮಾನ ಸೇವೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ.
ಬೆಂಗಳೂರಿನ ಕನ್ನಡ ಭವನದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎಂ.ಶೃತಿ ಅವರ ನೇತೃತ್ವದಲ್ಲಿ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ.
ಕಲಾವಿದರಿಗೆ ನೀಡುವ ವಾರ್ಷಿಕ ಗೌರವ ಪ್ರಶಸ್ತಿಯು ರೂ.25,000 ನಗದು, ಸ್ಮರಣಿಕೆ, ಶಾಲು, ಹಾರ ಮತ್ತು ಫಲತಾಂಬೂಲ ನೀಡಿ ಗೌರವಿಸಲಾಗುವುದು.











