ದಾವಣಗೆರೆ : ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಮತದಾನವು 2026ರ ಅಕ್ಟೋಬರ್ 23 ರ ಶುಕ್ರವಾರ ನಡೆಯಲಿರುವುದರಿಂದ, ಅರ್ಹಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಶುಕ್ರವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ
ಮತದಾರರು ಚುನಾವಣೆಯ ಮತದಾನದಲ್ಲಿ ಭಾಗವಹಿಸಲು ಪೂರ್ವಾನುಮತಿಯನ್ನು ಪಡೆಯುವ ಷರತ್ತಿಗೊಳಪಟ್ಟು, ರಜೆ ಮಂಜೂರು ಮಾಡಲು ಅಧಿಕಾರವುಳ್ಳ ಪ್ರಾಧಿಕಾರಿಗಳು ಈ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕೆಂದು ಅದೇಶದಲ್ಲಿ ತಿಳಿಸಲಾಗಿದೆ.
ವಿಧಾನ ಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ ಆದೇಶದಲ್ಲಿ ತಿದ್ದುಪಡಿ – ಜಿಲ್ಲಾಧಿಕಾರಿ ಆದೇಶ
ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆ-2026ರ ಹಿನ್ನೆಲೆಯಲ್ಲಿ ಈ ಹಿಂದೆ ಹೊರಡಿಸಲಾಗಿದ್ದ ಮದ್ಯ ಮಾರಾಟ ನಿಷೇಧ (ಶುಷ್ಕ ದಿನ) ಆದೇಶಕ್ಕೆ ಸಂಬಂಧಿಸಿದಂತೆ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ತಾಲ್ಲೂಕು , ಹರಿಹರ ತಾಲ್ಲೂಕು (ಹರಿಹರ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ ಹೊರತುಪಡಿಸಿ) ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ಟೋಬರ್ 21 ರಂದು ಸಂಜೆ 6 ಗಂಟೆಯಿಂದ ಅಕ್ಟೋಬರ್ 23 ರ ಸಂಜೆ 7 ಗಂಟೆಯವರಿಗೆ ಮದ್ಯ ಮಾರಾಟ ಮತ್ತು ಸರಬರಾಜನ್ನು ನಿಷೇಧಿಸಿದೆ. ದಾವಣಗೆರೆ ನಗರ ವ್ಯಾಪ್ತಿಯ ಕೆ.ಎಸ್.ಬಿ.ಸಿ.ಎಲ್ (KSBCL) ಡಿಪೋ ಹೊರತುಪಡಿಸಿ ಆದೇಶ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಜಿ.ಎಂ. ಗಂಗಾಧರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ.











