Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಧ್ವಾಚಾರ್ಯರ ವಿಚಾರಧಾರೆಗಳು ಸದಾ ಆದರ್ಶನೀಯ : ಎಡಿಸಿ ಬಿ.ಟಿ.ಕುಮಾರಸ್ವಾಮಿ

---Advertisement---

ಚಿತ್ರದುರ್ಗ : ಅ.21 : ಜಗತ್ತಿನಲ್ಲಿ ಹೆಚ್ಚುತ್ತಿರುವ ಅಶಾಂತಿ ಮತ್ತು ಕಲಹಗಳ ನಿವಾರಣೆಗೆ ಮಧ್ವಾಚಾರ್ಯರ ದ್ವೈತ ತತ್ವಜ್ಞಾನ ಹಾಗೂ ಆಚಾರ್ಯ ಪರಂಪರೆಯ ವಿಚಾರಧಾರೆಗಳು ಅತ್ಯಂತ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಧ್ವಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಧ್ವಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಶಂಕರಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರು ಹಾಗೂ ಬಸವಣ್ಣನವರಂತಹ ಮಹಾಪುರುಷರು ಮನುಷ್ಯರಾಗಿ ಜನ್ಮತಾಳಿ, ತಮ್ಮ ಬದುಕಿನ ಮೂಲಕವೇ ಜಗತ್ತಿಗೆ ಸಂದೇಶ ನೀಡಿದ್ದಾರೆ. ಇಂದು ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅಶಾಂತಿ ಹಾಗೂ ಹಿಂಸೆಯ ಹಾದಿ ಹಿಡಿಯುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಆಚಾರ್ಯರ ಕೃತಿಗಳ ಅಧ್ಯಯನ ಮತ್ತು ಪಾಲನೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು.
ಸರ್ಕಾರವು ಈಗಾಗಲೇ ಶಂಕರಚಾರ್ಯರ ಜಯಂತಿಯಂತೆ ಮಧ್ವಾಚಾರ್ಯರ ಜಯಂತಿಯನ್ನೂ ಸರ್ಕಾರಿ ಮಟ್ಟದಲ್ಲಿ ಆಚರಿಸಲು ನಿರ್ದೇಶನ ನೀಡಿದೆ. ಪ್ರಸ್ತುತ ವಿಧಾನ ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಯಂತಿ ಕಾರ್ಯಕ್ರಮವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ ಎಂದು ಹೇಳಿದರು.

ನಮ್ಮ ಸಂಸ್ಕøತಿ ಮತ್ತು ಪರಂಪರೆ ಅಪಾರವಾದದ್ದು. ಆದರೆ ಆಧುನಿಕ ಸಾಮಾಜಿಕ ಮಾಧ್ಯಮ ಹಾಗೂ ಪಾಶ್ಚಿಮಾತ್ಯ ಪ್ರಭಾವದಿಂದಾಗಿ ಸಂಸ್ಕøತಿ ಕ್ಷೀಣಿಸುತ್ತಿದೆ. ಅದನ್ನು ಪುನರುಜ್ಜೀವನಗೊಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಉಡುಪಿಯಲ್ಲಿ ಶ್ರೀಕೃಷ್ಣನ ಪ್ರತಿμÁ್ಠಪನೆ ಹಾಗೂ ಅಷ್ಟಮಠಗಳ ಸ್ಥಾಪನೆ ಮೂಲಕ ಮಧ್ವಾಚಾರ್ಯರು ಈ ನಾಡಿಗೆ ಪವಿತ್ರ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ್ ಮಾತನಾಡಿ, ಮಹಾನ್ ತತ್ವಜ್ಞಾನಿ ಹಾಗೂ ದಾರ್ಶನಿಕರ ತತ್ವ-ಸಿದ್ಧಾಂತಗಳನ್ನು ಬರೀ ಪ್ರವಚನಗಳಲ್ಲಿ ಕೇಳುವುದಷ್ಟೇ ಅಲ್ಲದೆ, ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಜಯಂತಿ ಆಚರಣೆಗಳಿಗೆ ಅರ್ಥ ಬರುತ್ತದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ಈಗಾಗಲೇ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಸರ್ಕಾರಿ ಮಟ್ಟದಲ್ಲಿ ಆಚರಿಸಲು ಆದೇಶಿಸಿ, ಪ್ರತಿವರ್ಷ ಆಚರಿಸಿಕೊಂಡು ಬರುತ್ತಿದೆ. ಅದರಂತೆ ಈ ವರ್ಷದಿಂದ ಮಧ್ವಾಚಾರ್ಯರ ಜಯಂತಿಯನ್ನೂ ಸರ್ಕಾರದ ವತಿಯಿಂದ ಆಚರಿಸಲು ನಿರ್ಧರಿಸಿರುವುದು ಶ್ಲಾಘನೀಯ. ಇದೇ ಮಾದರಿಯಲ್ಲಿ ವಿಶಿಷ್ಠಾದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀ ರಾಮಾನುಜಾಚಾರ್ಯರ ಜಯಂತಿಯನ್ನೂ ಕೂಡ ಸರ್ಕಾರಿ ಹಂತದಲ್ಲೇ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

 

ಉಡುಪಿಯಲ್ಲಿ ಶ್ರೀಕೃಷ್ಣ ದೇವರ ವಿಗ್ರಹ ಪ್ರತಿಷ್ಠಾಪಿಸಿ, ದ್ವೈತ ಸಿದ್ಧಾಂತದ ಪ್ರಚಾರ ಹಾಗೂ ನಿರ್ವಹಣೆಗಾಗಿ ಅಷ್ಟಮಠಗಳನ್ನು ಸ್ಥಾಪಿಸಿದ ಮಧ್ವಾಚಾರ್ಯರ ಕೊಡುಗೆ ಅನನ್ಯ. ಅವರು ಹಾಕಿಕೊಟ್ಟ ದಾರಿಯಲ್ಲಿ ಇಂದು ಅಷ್ಟಮಠಗಳು ನಿರಂತರವಾಗಿ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿವೆ. ಅದ್ವೈತ, ವಿಶಿಷ್ಟಾದ್ವೈತ ಹಾಗೂ ದ್ವೈತ ಸಿದ್ಧಾಂತಗಳ ಮೂಲ ಉದ್ದೇಶ ಮಾನವ ಜೀವನದ ಸನ್ಮಾರ್ಗವೇ ಆಗಿದೆ ಎಂದು ತಿಳಿಸಿದರು.

ಉತ್ತರಾಧಿ ಮಠದ ಆಡಳಿತಾಧಿಕಾರಿ ಪ್ರಭಂಜನಾಚಾರ್ ಮಾತನಾಡಿ, ತ್ರೇತಾಯುಗದಲ್ಲಿ ಹನುಮಂತನಾಗಿ, ದ್ವಾಪರಯುಗದಲ್ಲಿ ಭೀಮಸೇನನಾಗಿ ಭಗವಂತನ ಸೇವೆಗೈದ ವಾಯುದೇವರು, ಕಲಿಯುಗದಲ್ಲಿ ಜ್ಞಾನ ಮಾರ್ಗವನ್ನು ಪುನರುಜ್ಜೀವನಗೊಳಿಸಲು ಮಧ್ವಾಚಾರ್ಯರಾಗಿ ಅವತರಿಸಿದರು. ಅವರು ಕೇವಲ ಒಂದು ವರ್ಗಕ್ಕಷ್ಟೇ ಸೀಮಿತವಾಗದೆ, ಜಗತ್ತಿನ ಸಮಸ್ತ ಜೀವರಾಶಿಗಳ ಕಲ್ಯಾಣಕ್ಕಾಗಿ ಶ್ರಮಿಸಿದರು ಎಂದು ಬಣ್ಣಿಸಿದರು.
ಮಧ್ವಾಚಾರ್ಯರು ಕೇವಲ ಅಧ್ಯಾತ್ಮಿಕ ರಂಗಕ್ಕಷ್ಟೇ ಸೀಮಿತವಾಗದೆ, ಸಾಮಾಜಿಕ ಕಳಕಳಿಯ ಅನೇಕ ಕಾರ್ಯಗಳನ್ನು ಮಾಡಿದ್ದಾರೆ. ‘ನೂರು ಮಂದಿ ದುಷ್ಟರು ಶಿಕ್ಷೆಯಿಂದ ತಪ್ಪಿಸಿಕೊಂಡರೂ ಪರವಾಗಿಲ್ಲ, ಆದರೆ ಒಬ್ಬ ಪ್ರಾಮಾಣಿಕನಿಗೆ ಎಂದಿಗೂ ಅನ್ಯಾಯವಾಗಬಾರದು’ ಎಂಬ ತತ್ವ ಸಾರಿದ ಮಹಾನ್ ನ್ಯಾಯನಿಷ್ಠರು ಅವರು ಎಂದರು.
ಮಧ್ವಾಚಾರ್ಯರು ರಚಿಸಿದ 37 ‘ಸರ್ವಮೂಲ’ ಗ್ರಂಥಗಳು ಇಂದಿಗೂ ಮಾನವಕುಲಕ್ಕೆ ಮಾರ್ಗದರ್ಶಕವಾಗಿವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಖಲಿ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ ಟಿ.ಕೆ.ನಾಗರಾಜರಾವ್, ಜಂಟಿ ಕಾರ್ಯದರ್ಶಿ ವಾದಿರಾಜ್, ಶ್ರೀ ಹರಿವಾಯು ಗುರು ಸೇವಾ ಟ್ರಸ್ಟ್ ಅಧ್ಯಕ್ಷ ದ್ವಾರಕನಾಥ್, ನಿವೃತ್ತ ಉಪ ತಹಶೀಲ್ದಾರ್ ವಾಸುದೇವಮೂರ್ತಿ, ವಿದ್ವಾನ್ ರಾಘವಚಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಷಾ, ಯಲ್ಲಪ್ಪ ಸೇರಿದಂತೆ ಮತ್ತಿತರರು ಇದ್ದರು. ಡಾ.ನವೀನ್ ಮಸ್ಕಲ್ ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now