ದಾವಣಗೆರೆ : ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು, ಪರಿಸರ ಸಂರಕ್ಷಣೆಯ ಭಾಗವಾಗಿ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಸಾರ್ವಜನಿಕರು ಹಾಗೂ ಅಂಗಡಿ ಮಾಲೀಕರುಗಳಿಗೆ ಸೂಚಿಸಲಾಗಿದೆ.
ಕೈಯಿಂದ ನೂಲುವ, ಕೈಯಿಂದ ನೇಯ್ದ ಅಥವಾ ಯಂತ್ರದಿಂದ ತಯಾರಿಸಿದ ಹತ್ತಿ, ಪಾಲಿಯಸ್ಟರ್, ಉಣ್ಣೆ, ರೇಷ್ಮೆ ಹಾಗೂ ಖಾದಿಯಿಂದ ಮಾಡಿದ ಧ್ವಜಗಳನ್ನು ಮಾತ್ರ ಬಳಸಬಹುದಾಗಿದೆ,
ನಿಯಮ ಮೀರಿ ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ-2016 ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ, 1986ರ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ ದಾವಣಗೆರೆಯಲ್ಲಿ ‘ಕಿತ್ತೂರು ರಾಣಿ ಚನ್ನಮ್ಮ ಜಯಂತಿ’ ಆಚರಣೆ.
ದಾವಣಗೆರೆ, ಅಕ್ಟೋಬರ್. 22(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ಸಂಯುಕ್ತಾಶ್ರಯದಲ್ಲಿ ‘ಕಿತ್ತೂರು ರಾಣಿ ಚನ್ನಮ್ಮ ಜಯಂತಿ’ ಕಾರ್ಯಕ್ರಮವನ್ನು ಅಕ್ಟೋಬರ್ 23, ರಂದು ಬೆಳಿಗ್ಗೆ 11:00 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.











