Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Post-matric scholarships, incentive grants, and hostel admission for Scheduled Caste students: Online applications invited
---Advertisement---

ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆದಿಂದ ಪ್ರಸಕ್ತ ಸಾಲಿನಲ್ಲಿ ಡಿಸೆಂಬರ್ 23 ರಿಂದ 25 ರವರೆಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ ಎಂಬ ಧ್ಯೇಯವಾಕ್ಯದೊಂದಿಗೆ ತೋಟಗಾರಿಕಾ ಮೇಳ ಹಮ್ಮಿಕೊಳ್ಳಲಾಗಿದೆ.

 ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ವಿಶಿಷ್ಟ ಕೃಷಿಕರಿಗೆ, ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 25 ಜಿಲ್ಲೆಗಳ ವ್ಯಾಪ್ತಿಯ ಪ್ರತಿಯೊಂದು ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆ ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.

 ಆಸಕ್ತ ಧಾರವಾಡ ಜಿಲ್ಲೆಯ ರೈತ, ರೈತ ಮಹಿಳೆಯರು ಅರ್ಜಿ ನಮೂನೆಯನ್ನು ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಕುಂಬಾಪುರ ಧಾರವಾಡದಲ್ಲಿ ಪಡೆಯಬಹುದು  ಅಥವಾ ತೋಟಗಾರಿಕೆ  ವಿಜ್ಞಾನಗಳ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣ ವೆಬ್ ಸೈಟ್: www.uhsbagalkot.karnataka.gov.in  ಮೂಲಕ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 30 ರೊಳಗಾಗಿ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ, ಕುಂಬಾಪುರ ಧಾರವಾಡದಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 18004257910 ಅಥವಾ ಡಾ. ಶಿವಯೋಗಿ ರ್ಯಾವಳದ, ವಿಸ್ತರಣಾ ಮುಂದಾಳು: 8861067360 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Join WhatsApp

Join Now

Join Telegram

Join Now