ಬೆಂಗಳೂರು: ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳು ಸಿಗುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಆಡಳಿತದಲ್ಲಿ ಉತ್ತರದಾಯಿತ್ವ ತರುವ ಉದ್ದೇಶದಿಂದ, ರಾಜ್ಯ ಸರ್ಕಾರದ ಎಲ್ಲಾ ನೌಕರರು ತಮ್ಮ ಕರ್ತವ್ಯದ ಕೇಂದ್ರಸ್ಥಾನದಲ್ಲೇ ಕಡ್ಡಾಯವಾಗಿ ವಾಸವಿರಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೇಂದ್ರಸ್ಥಾನದಲ್ಲಿ ವಾಸಿಸದ ಅಧಿಕಾರಿ ಮತ್ತು ಸಿಬ್ಬಂದಿಯ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಗಳಡಿ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.
ಇದರೊಂದಿಗೆ, ಆರೋಗ್ಯ ಸೇವೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನವೆಂಬರ್ 1ರಿಂದ ಅನ್ವಯವಾಗುವಂತೆ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಲ್ಲಾ ವೈದ್ಯರಿಗೆ ರಾತ್ರಿ ಪಾಳಿ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ವೈದ್ಯರು ರಾತ್ರಿ 9 ಗಂಟೆಯ ನಂತರ ಸರ್ಕಾರದ ‘ಕರ್ತವ್ಯ’ (Kartavya) ಆ್ಯಪ್ ಮೂಲಕವೇ ತಮ್ಮ ಹಾಜರಾತಿಯನ್ನು ದಾಖಲಿಸಬೇಕಾಗುತ್ತದೆ.
ಕೇಂದ್ರಸ್ಥಾನದಲ್ಲೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರದ ಎಲ್ಲಾ ನೌಕರರು ತಾವು ನಿಯೋಜನೆಗೊಂಡಿರುವ ಕೇಂದ್ರಸ್ಥಾನದಲ್ಲೇ ವಾಸವಿರಬೇಕು. ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ನಾಗರಿಕ ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತುಕ್ರಮ ಜರುಗಿಸಲಾಗುತ್ತದೆ.
ಜನಸೇವೆಗೆ ಸದಾ ಸನ್ನದ್ಧತೆ, "ಕರ್ತವ್ಯ" ನಿರ್ವಹಣೆಯಲ್ಲಿ ಹೊಣೆಗಾರಿಕೆ
ರಾಜ್ಯದ ಸರ್ಕಾರಿ ನೌಕರರು ತಮ್ಮ ಕರ್ತವ್ಯದ ಕೇಂದ್ರಸ್ಥಾನದಲ್ಲಿಯೇ ವಾಸಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳು ಲಭ್ಯವಾಗುವುದನ್ನು ಖಚಿತಪಡಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ನವೆಂಬರ್… pic.twitter.com/HJbAqm5d5o
ಇದನ್ನು ಓದಿವಾಟ್ಸಾಪ್ ವೆಬ್ ಬಳಕೆದಾರರೇ ಎಚ್ಚರ : ಖಾತೆ ದುರ್ಬಳಕೆ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಗಂಭೀರ ಎಚ್ಚರಿಕೆ— DIPR Karnataka (@KarnatakaVarthe) October 23, 2026
ವೈದ್ಯರಿಗೆ ‘ಕರ್ತವ್ಯ’ ಆ್ಯಪ್ ಹಾಜರಾತಿ: ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ನವೆಂಬರ್ 1ರಿಂದ ರಾತ್ರಿ 9 ಗಂಟೆಯ ನಂತರ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕವೇ ಹಾಜರಾತಿ ದಾಖಲಿಸುವುದು ಕಡ್ಡಾಯ.
ವಿನಾಯಿತಿ ಸೌಲಭ್ಯ: ಅಧಿಕೃತ ರಜೆಯಲ್ಲಿರುವ ಹಾಗೂ ಮುಂಚಿತವಾಗಿಯೇ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿರುವ ಸಿಬ್ಬಂದಿಗೆ ರಾತ್ರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗುತ್ತದೆ.
ಪ್ರತಿ ತಿಂಗಳು ಕಟ್ಟುನಿಟ್ಟಿನ ಪರಿಶೀಲನೆ: ಇಲಾಖೆಯ ಆಯುಕ್ತರು ಹಾಗೂ ಆಯಾ ಜಿಲ್ಲಾ ಆರೋಗ್ಯ ಅಧಿಕಾರಿಗಳು (DHO) ಪ್ರತಿ ತಿಂಗಳು ರಾತ್ರಿ ಪಾಳಿ ಹಾಜರಾತಿ ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಲಿದ್ದಾರೆ.










