ಸುದ್ದಿಒನ್, ಹಿರಿಯೂರು, ಅಕ್ಟೋಬರ್. 24 : ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಕಲಾವಿದರ ಪಾತ್ರ ಮಹತ್ವದ್ದಾಗಿದೆ ಎಂದು ಹಿರಿಯೂರು ಉಪಚುನಾವಣೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜಿ. ಜಯರಾಮಯ್ಯ ಅಭಿಪ್ರಾಯಪಟ್ಟರು.
ತಾಲೂಕಿನ ಬಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ದೇವಿ ಗೊಲ್ಲಾಹಳ್ಳಮ್ಮ ದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಮೆಂಟಲ್ ಮಂಜ ಬಿಕಾಂ ಭಾಗ್ಯ ಎಂಬ ಸುಂದರ ಸಾಮಾಜಿಕ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.
ನಾಟಕ ಕಲೆ ಜನರಿಗೆ ಮನರಂಜನೆ ನೀಡುವುದರ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವ ಪ್ರಬಲ ಮಾಧ್ಯಮವಾಗಿದೆ. ತಮ್ಮ ಕಲೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಲಾವಿದರ ಪರಿಶ್ರಮ ಹಾಗೂ ಸೇವೆ ಶ್ಲಾಘನೀಯ ಎಂದು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ನಾಟಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ದೊರೆಯುತ್ತದೆ. ಇಂತಹ ಕಾರ್ಯಕ್ರಮಗಳು ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಕಲಾವಿದರನ್ನು ಗೌರವಿಸುವುದರ ಜೊತೆಗೆ ಅವರ ಕಲಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಬೇಕಿದೆ. ಬಾಲೆನಹಳ್ಳಿ ಗ್ರಾಮದಲ್ಲಿ ನಡೆದ ಈ ನಾಟಕ ಪ್ರದರ್ಶನವು ಗ್ರಾಮಸ್ಥರಲ್ಲಿ ಸಾಂಸ್ಕೃತಿಕ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವ ಪಡೆದಿದೆ. ನಾನು ಕೂಡ ಈಗಾಗಲೇ ಹಿರಿಯೂರು ಕ್ಷೇತ್ರದಲ್ಲಿ ಸುಮಾರು 300 ನಾಟಕಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿಸಿ ನಾಗರಾಜ್, ಜಗನ್ನಾಥ್, ವಿಶ್ವನಾಥಪ್ಪ,ಗುಡಿಗೌಡ ತಿಪ್ಪೇಸ್ವಾಮಿ, ಸಿಂಹ ಹರೀಶ್ ಕುಮಾರ್, ರಾಮಣ್ಣ, ಚೇತನ್, ಶ್ರೀಧರ್, ತಿರುಮಲೇಶ್, ವೆಂಕಟೇಶ್ ಮೂರ್ತಿ, ಭರತ್ ಮದ್ದನಕುಂಟೆ, ಈರಣ್ಣ ಸೇರಿದಂತೆ ಗ್ರಾಮಸ್ಥರಿದ್ದರು.








