Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಚುರುಕಾದ ಹಿಂಗಾರು : ಇಂದೂ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

---Advertisement---

ಬೆಂಗಳೂರು :  ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ.

ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ಉತ್ತರ ಒಳನಾಡಿನ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಿಂಗಾರು ಮಳೆ ಸುರಿಸಿದೆ. ಇದರಿಂದಾಗಿ ಜೋಳ, ಸೂರ್ಯಕಾಂತಿ, ಸಜ್ಜೆ, ಕಡಲೆ ಸೇರಿದಂತೆ ಇನ್ನಿತರ ಹಿಂಗಾರು ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕರಾವಳಿ ಹಾಗೂ ಒಳನಾಡಿನ ಹಲವೆಡೆ ಅಕ್ಟೋಬರ್ 29ರವರೆಗೂ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Join WhatsApp

Join Now

Join Telegram

Join Now