Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯ ಪತ್ರಕರ್ತ ಸಾಹಿತಿ ಶೂದ್ರ ಶ್ರೀನಿವಾಸ್ ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ

---Advertisement---

ಸುದ್ದಿಒನ್, ಬೆಂಗಳೂರು, ಅಕ್ಟೋಬರ್. 24 : ಕೆಂಧೂಳಿ ಪತ್ರಿಕೆ ಕಳೆದ ವರ್ಷದಿಂದ ನೀಡುವ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಸಾಹಿತಿ ಹಾಗು ಪತ್ರಕರ್ತ ಶೂದ್ರ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಿದೆ.

ಕೆಂಧೂಳಿ ವಾರಪತ್ರಿಕೆ ಕಳೆದ ವರ್ಷದಿಂದ ಈ ಪ್ರಶಸ್ತಿಯನ್ನು ನೀಡಲು ಆರಂಭಿಸಿದೆ.ಪತ್ರಿಕೆ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 6 – 2019 ರಲ್ಲಿ ಆರಂಭವಾಗಿದ್ದು, ಹೀಗಾಗಿ ‘ಕೆಂಧೂಳಿ ರಾಜ್ಯೋತ್ಸವ ‘ಹೆಸರಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ

ಈಗ ಪತ್ರಿಕೆ ಆರು ವರ್ಷ ಪೂರೈಸಿ ಏಳನೇ ವರ್ಷಕ್ಕೆ ಕಾಲಿರಿಸಿದೆ. ಪ್ರತಿ ವರ್ಷವೂ ಈ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಸಾಹಿತ್ಯಕ್ಷೇತ್ರ, ಪತ್ರಿಕಾ, ಕೃಷಿ, ಕನ್ನಡ ಚಳವಳಿ,ಸಮಾಜಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರಿಗೆ ಈ ಪ್ರಶಸ್ತಿ ನೀಡಲು ಕೆಂಧೂಳಿ ಬಳಗ ತೀರ್ಮಾನಿಸಿದೆ.  ಹೀಗಾಗಿ ಈ ಬಾರಿ ಪತ್ರಕರ್ತರು ಮತ್ತು ಸಾಹಿತಿಗಳು ಆದ ಶೂದ್ರ ಶ್ರೀನಿವಾಸ್ ಅವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲು ಸಮಿತಿ ಹರ್ಷಿಸುತ್ತದೆ.
ಕಳೆದ ವರ್ಷ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ನಾಡಿನ ಖ್ಯಾತ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು, ಈ ಪ್ರಶಸ್ತಿಯು ೧೦ ಸಾವಿರ ನಗದು, ಆಕರ್ಷಕ ಫಲಕ ಹೊಂದಿರುತ್ತದೆ. ಪ್ರಶಸ್ತಿ ಸಮಾರಂಭದ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುತ್ತದೆ.

ಖ್ಯಾತ ಸಾಹಿತಿ ಡಾ.ಬಿ.ಎಲ್.ವೇಣು ಅವರ ಅಧ್ಯಕ್ಷತೆಯಲ್ಲಿ.ಸಾಹಿತಿ ಡಾ.ಶಿವಕುಮಾರ್ ಕಂಪ್ಲಿ, ಶ್ರೀದೇವಿ ಕೆರೆಮನೆ ಹಾಗೂ ಡಾ.ಗುರುದೇವ್ ಎಸ್‌.ಎ. ಅವರನ್ನೊಳಗೊಂಡ ಸಮತಿಯು ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಶೂದ್ರ ಶ್ರೀನಿವಾಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಸಂಪಾದಕರಾದ ತುರುವನೂರು ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now