Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

---Advertisement---

ಬೆಂಗಳೂರು : ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದೂ ಸಹ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಚಾಮರಾಜನಗರ, ಮೈಸೂರು, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು-ಮಿಂಚಿನ ಅಬ್ಬರ ಕಂಡುಬರಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇದರೊಂದಿಗೆ ಉತ್ತರ ಒಳನಾಡಿನ ವಿಜಯನಗರ, ಬಳ್ಳಾರಿ ಸೇರಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Join WhatsApp

Join Now

Join Telegram

Join Now