Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಿಲ್ಲಾ ರೆಡ್ಡಿ ಜನಸಂಘದಿಂದ ಪ್ರತಿಭಾ ಪುರಸ್ಕಾರ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಅ. 25 : ಜಿಲ್ಲಾ ರೆಡ್ಡಿ ಜನಸಂಘ (ರಿ.)ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗು ತ್ತಿದ್ದು, ಸಂಘದ ಆಸ್ತಿಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳ ಕಲ್ಪನೆ ಮತ್ತು ಬಂದಿರುವ ಆದಾಯವನ್ನು ಸಮರ್ಪಕವಾಗಿ ಬಳಸಿ ಸಂಘವನ್ನು ಮತ್ತಷ್ಟು ಸದೃಢಗೊಳಿಸುವುದು ಎಂದು ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷರಾದ ಜಿ.ಎಚ್.ತಿಪ್ಪಾರೆಡ್ಡಿ ತಿಳಿಸಿದರು.

ಜಿಲ್ಲಾ ರೆಡ್ಡಿ ಜನಸಂಘ (ರಿ.)ವತಿಯಿಂದ ನಗರದ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿ ಕೊಂಡಿದ್ದ 2025-26ನೇ ಸಾಲಿನಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ. ಮತ್ತು ಪಿಯು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮತ್ತು ಸಮುದಾಯದ ಸಾರ್ಥಕ ಸೇವಾ ಸಲ್ಲಿಸಿದವರಿಗೆ ನಡೆದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ರೆಡ್ಡಿ ಜನ ಸಂಘದ ವತಿಯಿಂದ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆದಿರುವುದು ಮತ್ತು ಅತ್ಯುತ್ತಮ ಅಂಕಗಳನ್ನು ಗಳಿಸಿರುವುದು ಅತ್ಯಂತ ಸಂತೋಷದ ವಿಷಯವಾಗಿದೆ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ. 85ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತಿದೆ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ತಲಾ 15,000 ರೂಪಾಯಿ ಹಾಗೂ ಎಸ್.ಎಸ್. ಎಲ್.ಸಿ ಪಾಸಾದ ವಿದ್ಯಾರ್ಥಿಗಳಿಗೆ 10,000 ರೂಪಾಯಿಗಳ ವರೆಗೆ ಪ್ರೋತ್ಸಾಹಧನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು ಇದಕ್ಕೆ ಸುಮಾರು 45 ರಿಂದ 50 ಲಕ್ಷ ರೂಪಾಯಿ ಗಳವರೆಗೆ ಖರ್ಚಾಗುತ್ತಿದೆ ಎಂದು ತಿಳಿಸಿದರು.

ಟೈಕ್ವಾಂಡೋ ಹಾಗೂ ಏಷ್ಯನ್ ಗೇಮ್ಸ್‍ನಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಚಿನ್ನ ಹಾಗೂ ಕಂಚಿನ ಪದಕಗಳನ್ನು ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಮತ್ತು ವಿಶೇಷ ಸಾಧನೆ ಮಾಡಿದ ಮಕ್ಕಳನ್ನು ಸಂಘದವತಿಯಿಂದ ಗುರುತಿಸಿ ಸನ್ಮಾನಿಸುತ್ತಿದೆ. ದಾವಣಗೆರೆ ಇಂಜಿನಿಯರಿಂಗ್ ಕಾಲೇಜು ಬಳಿ ಇರುವ ಸಂಘದ ಜಾಗವನ್ನು ವಾಣಿಜ್ಯ ಸಂಕೀರ್ಣ ಅಥವಾ ಹಾಸ್ಟೆಲ್ ನಿರ್ಮಿಸುವ ಕುರಿತು ತೀರ್ಮಾನಿಸಲಾಗಿದೆ. ಚಳಕೆರೆಯಲ್ಲಿ ಸಂಘದ ಒಡೆತನದ ಜಾಗದಲ್ಲಿ ನೂತನ ಬಿಲ್ಡಿಂಗ್ ನಿರ್ಮಿಸಿ ಬಾಡಿಗೆಗೆ ನೀಡುವ ಕುರಿತು ಚರ್ಚೆ ನಡೆಸಲಾಗುತ್ತದೆ ಸಂಘದ ವಿವಿಧ ಆಸ್ತಿಗಳು ಹಾಗೂ ಜಮೀನುಗಳ ಮೂಲಕ ಬರುವ ಬಾಡಿಗೆ ಮತ್ತು ಆದಾಯವನ್ನು ಕ್ರೋಢೀಕರಿಸಿ ಸಂಘದ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ. ಆದಾಯ ತೆರಿಗೆ ಇಲಾಖೆಗೆ ಸಂಬಂಧಿಸಿದಂತೆ ಹಿಂದೆ ಬಂದಿದ್ದ ನೋಟೀಸ್‍ಗಳಿಗೆ ಕಾನೂನುಬದ್ಧವಾಗಿ ಸ್ಪಷ್ಟನೆ ನೀಡಿ ಪರಿಹರಿಸಲಾಗಿದೆ ಎಂದು ತಿಳಿಸಿ ಚಳ್ಳಕೆರೆ ಜಗಳೂರು ಜಾಗದ ವಿಚಾರದಲ್ಲಿ ಕೆಲವು ಕಾನೂನು ತೊಡಕುಗಳಿದ್ದು, ಅಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹೊಸ ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಮಾ ಲೋಚನೆ ನಡೆಸಲಾಗಿದೆ ಎಂದು ತಿಪ್ಪಾರೆಡ್ಡಿ ತಿಳಿಸಿದರು.

ಜಿಲ್ಲಾ ರೆಡ್ಡಿ ಜನ ಸಂಘದ ಕಾರ್ಯದರ್ಶಿ ಶ್ರೀಮತಿ ಡಿ.ಕೆ.ಶೀಲ, ಪ್ರಸ್ತಾವಿಕವಾಗಿ ಮಾತನಾಡಿ, ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಮುಂದಿನ ಶೈಕ್ಷಣಿಕ ಜೀವನ ಹಾಗೂ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಸರಿಯಾದ ಹಾದಿಯನ್ನು ಆರಿಸಿಕೊಳ್ಳುವ ಕುರಿತು ತಮ್ಮ ಭವಿಷ್ಯದ ಗುರಿಯನ್ನು ಈಗಲೇ ನಿರ್ಧರಿಸುವುದು ಅತ್ಯಂತ್ಯ ಮುಖ್ಯವಾಗಿದೆ. ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಮುಗಿಸಿದ ಕೂಡಲೇ ತಮ್ಮ ಆಸಕ್ತಿ ಮತ್ತು ಸಾಮಥ್ರ್ಯಕ್ಕೆ ತಕ್ಕಂತೆ ಸರಿಯಾದ ಶಿಕ್ಷಣವನ್ನು ಆಯ್ಕೆ ಮಾಡಿಕೊಳ್ಳಬೇಕು ಹತ್ತನೇ ತರಗತಿಯ ಹಂತವು ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಬುನಾದಿಯಿದ್ದಂತೆ ಈ ಹಂತದಲ್ಲಿ ಯಾವುದೇ ತರಾತುರಿಯಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಹಾದಿಯನ್ನು ಆಯ್ಕೆ ಮಾಡುವ ಮುನ್ನ ಪೋಷಕರು, ಹಿರಿಯರು ಹಾಗೂ ಆಯಾ ಕ್ಷೇತ್ರದ ಸಾಧಕರೊಂದಿಗೆ ಸಮಾಲೋಚನೆ ನಡೆಸಿ, ಆ ಕ್ಷೇತ್ರದ ಸಾಧಕ-ಬಾಧಕಗಳನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜ್ಞಾನವಿಲ್ಲದೆ ಮನುಷ್ಯನ ಜೀವನ ಅಪೂರ್ಣವಾಗುತ್ತದೆ ಮಾನವೀಯ ಮೌಲ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆದು ಕಠಿಣ ಪರಿಶ್ರಮಪಟ್ಟರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದ ಅವರು. ಹತ್ತನೇ ತರಗತಿ ಪರೀಕ್ಷೆ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಯಾವುದೇ ಆತುರದ ನಿರ್ಧಾರಗಳನ್ನು ಕೈಗೊಳ್ಳದೆ, ಪೋಷಕರು ಹಾಗೂ ತಜ್ಞರ ಮಾರ್ಗದರ್ಶನದೊಂದಿಗೆ ತಮ್ಮ ಆಸಕ್ತಿಗೆ ತಕ್ಕ ಸೂಕ್ತ ಕೋರ್ಸ್‍ನ್ನು ಆಯ್ಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಎಂ.ಕೆ.ಅನಂತ ರೆಡ್ಡಿ, ಪ್ರಾರ್ಥಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಪರಶುರಾಮ ಜೆ. ವಂದಿಸಿದರು. ಕಾರ್ಯಕ್ರಮವನ್ನು ತಿಮ್ಮಾರೆಡ್ಡಿ, ಸಾಯಿ ನಿಖಿತ ನಿರೂಪಿಸಿ ದರು. ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ಖಂಜಾಚಿ ಜಿ.ವೈ.ಸುರೇಶ್ ಕುಮಾರ್, ಸದಸ್ಯರುಗಳಾದ ಡಾ.ಎಸ್.ಸದಾಶಿವರೆಡ್ಡಿ, ಕೆ.ವಿ.ರಾಮಕೃಷ್ಣ, ವಿ.ಆರ್.ಮಂಜುನಾಥ್, ಕೆ.ಹೆಚ್.ಸುದರ್ಶನರೆಡ್ಡಿ, ಪಿ.ಚಂದ್ರರೆಡ್ಡಿ, ಡಾ.ಪಿ.ಟಿ.ಚಂದ್ರಹಾಸ್, ಡಾ.ಕೆ.ಜಿ.ರಾಘವರೆಡ್ಡಿ, ಎಸ್.ನಾಗರಾಜ್, ಜಿ.ಟಿ.ತಿಪ್ಪೇಶ್, ಆರ್.ಎನ್ ವೇಣು ಗೋಪಾಲ, ಆರ್.ವಿ.ಮಾರುತೇಶ್ ರೆಡ್ಡಿ, ಡಾ. ಎಸ್.ಎನ್. ಹರೀಶ್, ಶ್ರೀಮತಿ ಸುಜಾತ, ಶ್ರೀಮತಿ ರೂಪ, ಶ್ರೀಮತಿ ಸುಮನಾ, ಶ್ರೀಮತಿ ರೇಖಾ, ಶ್ರೀಮತಿ ಇಂದಿರಮ್ಮ, ಶ್ರೀಮತಿ ಎಂ.ಎನ್. ಶೀಲಾ ಸೇರಿದಂತೆ ತಾಲೂಕು ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ ಅಧ್ಯಕ್ಷರುಗಳು ಮತ್ತು ಸಂಘದ ಸದಸ್ಯರುಗಳು ಉಪಸ್ಥಿ ತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now