Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅ.31 ರಿಂದ ಅಗ್ನಿವೀರ್ ನೇಮಕಾತಿ ರ್ಯಾಲಿ: ಸಕಲ ಸಿದ್ಧತೆಗೆ ಡಿಸಿ ಎಸ್.ರಮ್ಯಾ ಸೂಚನೆ

---Advertisement---

ಚಿತ್ರದುರ್ಗ.ಅ.26:  ಅಗ್ನೀವಿರ್ ನೇಮಕಾತಿ ಸಾಮಾನ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ, ನಗರದ ಓನಕೆ ಓಬವ್ವ ಕ್ರೀಡಾಂಗಣದಲ್ಲಿ ಅ.31 ರಿಂದ ನ.03 ವರೆಗೆ ನೇಮಕಾತಿ ರ್ಯಾಲಿ ನೆಡೆಯಲಿದ್ದು, ಸಕಲ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ರಮ್ಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಕುರಿತು ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಗ್ನಿವೀರ್ ಸಾಮಾನ್ಯ ಕರ್ತವ್ಯ, ತಾಂತ್ರಿಕ ಹಾಗೂ ಟ್ರೇಡ್ಸ್ ವರ್ಗಗಳ ಹುದ್ದೆಗೆಳ ನೇಮಕಾತಿ ರ್ಯಾಲಿಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಬೆಂಗಳೂರು ದಕ್ಷಿಣ, ಕೋಲಾರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಹಾಸನ, ಕೊಡಗು, ವಿಜಯನಗರ ಹಾಗೂ ಚಿತ್ರದುರ್ಗ ಸೇರಿದಂತೆ ಒಟ್ಟು 14 ಜಿಲ್ಲೆಗಳಿಂದ 957 ಅಭ್ಯರ್ಥಿಗಳು ರಾಲ್ಯಿಯಲ್ಲಿ ಭಾಗವಹಿಸಲಿದ್ದಾರೆ. ಅ.31 ರಂದು 543 ಹಾಗೂ ನ.1 ರಂದು 414 ಅಭ್ಯರ್ಥಿಗಳ ದೈಹಿಕ ಕ್ಷಮತೆ, ವೈದ್ಯಕೀಯ ಹಾಗೂ ವ್ಯಾಸಂಗ ಸೇರಿದಂತೆ ಇತರೆ ಮೂಲ ದಾಖಲೆಗಳ ಪರಿಶೀಲನೆಯನ್ನು ನಡೆಸಲಾಗುತ್ತದೆ.

ಆರೋಗ್ಯ ಇಲಾಖೆಯಿಂದ ತುರ್ತು ಸಂದರ್ಭ ಎದುರಿಸಲು ಸುಸಜ್ಜಿತ ಆಂಬ್ಯುಲೆನ್ಸ್‍ನೊಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನೇಮಿಸಬೇಕು. ಕ್ರೀಡಾ ಇಲಾಖೆಯಿಂದ ಮೈದಾನವನ್ನು ಸ್ವಚ್ಛಗೊಳಿಸಬೇಕು. ರ್ಯಾಲಿ ಹಿನ್ನಲೆಯಲ್ಲಿ ದೈನಂದಿನ ವಾಯುವಿಹಾರಿಗಳಿಗೆ ಪ್ರವೇಶ ನಿರ್ಬಂಧಿಸಬೇಕು. ಮುಂಜಾನೆ 3 ಗಂಟೆ ವಿದ್ಯಾರ್ಥಿಗಳು ವರದಿ ಮಾಡಿಕೊಳ್ಳುವುದರಿಂದ ಕ್ರೀಡಾಂಗಣದ ಸುತ್ತಲಿನ ಬೀದಿ ದೀಪಗಳು ಸುಸ್ಥಿತಿಯಲ್ಲಿರಬೇಕು. ವಿದ್ಯಾಭ್ಯಾಸದ ಅಂಕಪಟ್ಟಿ, ಜಾತಿ ಮತ್ತು ನಿವಾಸಿ ಪ್ರಮಾಣ ಪತ್ರ, ಎನ್.ಸಿ.ಸಿ ಹಾಗೂ ಕ್ರೀಡಾ ದಾಖಲೆಗಳ ಪರಿಶೀಲನೆಗೆ ಶಿಕ್ಷಣ, ಕಂದಾಯ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ 3 ತಂಡಗಳನ್ನು ನೇಮಿಸಬೇಕು. ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸುವ ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಉಳಿದುಕೊಳ್ಳಲು ಕ್ರೀಡಾಂಗಣದ ಸುತ್ತಮುತ್ತಲಿನ ವಿದ್ಯಾರ್ಥಿನಿಲಯ ಹಾಗೂ ಸಮುದಾಯ ಭವನಗಳಲ್ಲಿ ಅವಕಾಶ ಕಲ್ಪಿಸಬೇಕು. ಅಭ್ಯರ್ಥಿಗಳ ನೊಂದಣಿ ಹಾಗೂ ದಾಖಲೆಗಳ ಪರಿಶೀಲನೆ ಆನ್‍ಲೈನ್ ಮೂಲಕ ನಡೆಯಲಿದ್ದು, ಬಿ.ಎಸ್.ಎನ್.ಎಲ್ ವತಿಯಿಂದ ಸೂಕ್ತ ಸಾಮಥ್ರ್ಯದ ಇಂಟರ್‍ನೆಟ್ ಸಂಪರ್ಕ ನೀಡಬೇಕು. ಇದಕ್ಕೆ ತಗಲುವ ವೆಚ್ಚನ್ನು ಜಿಲ್ಲಾಡಳಿತದಿಂದ ಭರಿಸಲಾಗುವುದು. ರ್ಯಾಲಿ ನಡೆಯವ ದಿನಗಳಂದು ಅಭ್ಯರ್ಥಿಗಳು ಹಾಗೂ ಸೇನಾ ಅಧಿಕಾರಿಗಳು ಸೇರಿದಂತೆ ಕರ್ತವ್ಯ ನಿರತರಾದವರಿಗೆ ಜಿಲ್ಲಾಡಳಿತದಿಂದ ಆಹಾರದ ಸೌಲಭ್ಯ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ತಿಳಿಸಿದರು.

ಬಸ್ ವ್ಯವಸ್ಥೆ: ರೈಲು ಹಾಗೂ ಬಸ್‍ಗಳ ಮೂಲಕ ಆಗಮಿಸುವ ಅಭ್ಯರ್ಥಿಗಳು ಕ್ರೀಡಾಂಗಣಕ್ಕೆ ತೆರಳಲು ಅನುವಾಗುವಂತೆ ಸೂಕ್ತ ನಗರ ಸಂಚಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬಸ್ ಹಾಗೂ ರೈಲ್ವೇ ನಿಲ್ದಾಣಗಳಲ್ಲಿ ಅಭ್ಯರ್ಥಿಗಳು ಕ್ರೀಡಾಂಗಣಕ್ಕೆ ತೆರಳಲು ಮಾರ್ಗಸೂಚಿಗಳ ಬ್ಯಾನರ್‍ಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ರಮ್ಯಾ ಸೂಚನೆ ನೀಡಿದರು.

ಅಂತಿಮ ಹಂತದ ಸಿದ್ದತೆ ಪೂರ್ಣ:
ಸದರಿ ನೇಮಕಾತಿ ರ್ಯಾಲಿಯ ಹೊಣೆ ಹೊತ್ತಿರುವ ಕರ್ನಲ್ ಪುಷ್ಪರಾಜ್ ಮಾತನಾಡಿ, ರ್ಯಾಲಿಗೆ ಸಂಬಂಧಿಸಿದ ಅಂತಿಮ ಹಂತದ ಸಿದ್ದತೆಗಳು ಪೂರ್ಣಗೊಂಡಿವೆ. ಆನ್‍ಲೈನ್ ಮೂಲಕ ನಡೆದ ಪರೀಕ್ಷೆಯಲ್ಲಿ ಅರ್ಹತೆ ಪಡೆದ 957 ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಈಗಾಗಲೇ ನೀಡಲಾಗಿದೆ. ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ವರದಿ ಮಾಡಿಕೊಳ್ಳಬೇಕಾದ ದಿನಾಂಕ ಹಾಗೂ ಸಮಯವನ್ನು ಮುದ್ರಿಸಲಾಗಿದೆ. ಅ.31 ರಂದು 543 ಹಾಗೂ ನ.1 ರಂದು 414 ಅಭ್ಯರ್ಥಿಗಳ ದೈಹಿಕ ಕ್ಷಮತೆ, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

ಆರಂಭದಲ್ಲಿ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಪರಿಶೀಲಿಸಿ, ಆಧಾರ್ ಲಿಂಕ್ ಬಯೋಮೆಟ್ರಿಕ್ ನೊಂದಣಿ ಮಾಡಲಾಗುವುದು. ನಂತರ 100 ಅಭ್ಯರ್ಥಿಗಳಿಗೆ ಒಂದು ಗುಂಪು ರಚಿಸಿ, ರನ್ನಿಂಗ್ ಸ್ಪರ್ಧೆ ನಡೆಲಾಗುವುದು. ಇದರಲ್ಲಿ ಉತ್ತಿರ್ಣರಾಗುವ ಅಭ್ಯರ್ಥಿಗಳು ಇತರೆ ದೈಹಿಕ ಸಾಮಥ್ರ್ಯ ಸಾಬೀತು ಪಡಿಸುವ ಕ್ರೀಡೆಗಳ ಪಾಲ್ಗೊಳ್ಳಬೇಕು. ದೈಹಿಕ ಸಾಮಥ್ರ್ಯದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದೇಹದಾಢ್ರ್ಯತೆ ಹಾಗೂ ವೈದ್ಯಕೀಯ ಪರೀಕ್ಷೆಯನ್ನು ಸೇನಾ ವೈದ್ಯರು ನಡೆಸಲಿದ್ದಾರೆ. ಮರುದಿನ ದೈಹಿಕ ಪರೀಕ್ಷೆ ಪೂರ್ಣಗೊಳಿಸಿದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುವುದು. ಈ ಹಿನ್ನಲೆಯಲ್ಲಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಹಾಗೂ ಇತ್ತೀಚಿನ ಪಾಸ್ಪೋರ್ಟ್ ಅಳತೆ ಭಾಚಿತ್ರಗಳನ್ನು ಕಡ್ಡಾಯವಾಗಿ ತರಬೇಕು. ರ್ಯಾಲಿ ಬಂದೋಬಸ್ತ್‍ಗಾಗಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನೇಮಿಸುವಂತೆ ಕರ್ನಲ್ ಪುಷ್ಪರಾಜ್ ಕೋರಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now