ಬೆಂಗಳೂರು : ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇಂದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಮ್ಮ ಆರೋಗ್ಯದ ಬಗ್ಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದು, ಇಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ತುಸು ಹೆಚ್ಚಾದ ಕಾರಣ ತಕ್ಷಣವೇ ಆಸ್ಪತ್ರೆಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
ಇಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ನವರು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ವೇಳೆ ಹೃದಯಬಡಿತ ತುಸು ಹೆಚ್ಚಾದ ಕಾರಣ ತಕ್ಷಣವೇ ಆಸ್ಪತ್ರೆಗೆ ತೆರಳಿ ಅಗತ್ಯ ಚಿಕಿತ್ಸೆ ಪಡೆದಿದ್ದೇನೆ.
ನನ್ನ ಮೇಲಿನ ಕಾಳಜಿಯಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ…
— Dr. G Parameshwara (@DrParameshwara) October 27, 2026
ನನ್ನ ಮೇಲಿನ ಕಾಳಜಿಯಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೇರಿದಂತೆ ಬಹಳಷ್ಟು ಮಂದಿ ಹಿತೈಷಿಗಳು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಇನ್ನು ಹಲವರು ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ತಮ್ಮೆಲ್ಲರ ಪ್ರೀತಿ – ಕಾಳಜಿಗೆ ಧನ್ಯವಾದಗಳು ತಿಳಿಸಿದ್ದಾರೆ. .
ಯಾರೂ ಆತಂಕ ಪಡುವ ಅಗತ್ಯವಿಲ್ಲ. ದೇವರ ದಯೆಯಿಂದ ನನ್ನ ಆರೋಗ್ಯವೀಗ ಸ್ಥಿರವಾಗಿದೆ. ಆಸ್ಪತ್ರೆಯಲ್ಲಿರುವ ಇತರೆ ರೋಗಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನನ್ನನ್ನು ಭೇಟಿ ಮಾಡಲು ದಯವಿಟ್ಟು ಆಸ್ಪತ್ರೆ ಬಳಿ ಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.












