Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಮ್ಮೇನಹಳ್ಳಿ ಎನ್. ಬಸಪ್ಪ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ತಾಲ್ಲೂಕಿನ ಸಿರಿಗೆರೆ ಸಮೀಪದ ಜಮ್ಮೇನಹಳ್ಳಿಯ ಎನ್. ಬಸಪ್ಪ (90 ವರ್ಷ) ವಯೋ ಸಹಜ ಕಾರಣದಿಂದ ಸೋಮವಾರ ರಾತ್ರಿ ನಿಧನರಾದರು.

ವರ್ತಕರೂ, ಶಾಲಾ ಕಾಲೇಜು, ಬ್ಯಾಂಕ್‌ಗಳಲ್ಲಿ ಸದಸ್ಯರಾಗಿ, ಸಲಹಾ ಮಂಡಳಿಯ ಸದಸ್ಯರೂ, ನಿರ್ದೇಶಕರೂ ಆಗಿ ಬಹು ಕಾಲ ಸೇವೆ ಸಲ್ಲಿಸಿದ್ದರು. ಸಮಾಜ ಸೇವೆಯಲ್ಲಿ ಅವರು ಗುರುತಿಸಿಕೊಂಡಿದ್ದರು. ತರಳಬಾಳು ಸಂಸ್ಥೆಯ ಸಂಪಿಗೆ ಸಿದ್ಧೇಶ್ವರ ಪ್ರೌಢಶಾಲಾ ಸಲಹಾ ಸಮಿತಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು. ವೀರಶೈವ ವಿದ್ಯಾರ್ಥಿ ನಿಲಯದ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಅವರು ಮೂವರು ಹೆಣ್ಣು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜಿಗೆ ಮಂಗಳವಾರ ನೀಡಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now