Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಕೇಂದ್ರ ಚುನಾವಣಾ ಮುಖ್ಯ ಆಯುಕ್ತರ ವಜಾಕ್ಕೆ ಆಗ್ರಹ: ಕಮ್ಯುನಿಸ್ಟ್ ಪಕ್ಷದಿಂದ ಬೃಹತ್ ಪ್ರತಿಭಟನೆ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 28 : ಎಸ್.ಐ.ಆರ್. ರದ್ದುಪಡಿಸಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‍ಕುಮಾರ್ ವಜಾಗೊಳಿಸುವಂತೆ ಭಾರತ ಕಮ್ಯುನಿಸ್ಟ್ ಪಕ್ಷ ಜಿಲ್ಲಾ ಮಂಡಳಿಯಿಂದ ಒನಕೆ ಒಬವ್ವ ವೃತ್ತದಲ್ಲಿ ಬುಧವಾರ ಮಾನವ ಸರಪಳಿ ನಿರ್ಮಿಸಿ ಒತ್ತಾಯಿಸಲಾಯಿತು.

ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮಾತನಾಡಿ ದೇಶದ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ. ನಾಯಕರುಗಳು ಜ್ಞಾನೇಶ್‍ಕುಮಾರ್‍ಗೆ ಕುಮ್ಮಕ್ಕು ನೀಡುತ್ತ ಎಸ್.ಐ.ಆರ್.ಮೂಲಕ ನೈಜ ಮತದಾರರನ್ನು ಮತಪಟ್ಟಿಯಿಂದ ಹೊರಗಿಟ್ಟಿದ್ದಾರೆ. ಮತದಾನದ ಹಕ್ಕು ಕಳೆದುಕೊಂಡರೆ ದಲಿತರು
ಬಡವರು, ಅಲ್ಪಸಂಖ್ಯಾತರು ಶೋಷಿತರು ಬದುಕುವುದಾದರೂ ಹೇಗೆ ಎಂದು ಪ್ರಶ್ನಿಸಿದರು.?

ಸಹ ಕಾರ್ಯದರ್ಶಿ ಜಾಫರ್ ಮಾನವ ಸರಪಳಿ ಉದ್ದೇಶಿಸಿ ಮಾತನಾಡುತ್ತ ಎಸ್.ಐ.ಆರ್.ಮೂಲಕ ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಅವೈಜ್ಞಾನಿಕ. ಇದರಿಂದ ಭಾರತದ ಮೂಲ ನಿವಾಸಿಗಳ ಹಕ್ಕಿಗೆ ಚ್ಯುತಿ ಬಂದಿದೆ. ಬಡವರು, ಅಲೆಮಾರಿಗಳು, ಬುಡಕಟ್ಟು ನಿವಾಸಿಗಳು ಹಿಂದುಳಿದವರು, ಎಸ್ಸಿ, ಎಸ್ಟಿ.ಗಳು ಮತದಾನದಿಂದ ಹಕ್ಕಿನಿಂದ ವಂಚಿತರಾಗಿದ್ದಾರೆ. ರಾಜ್ಯದಲ್ಲಿ 99 ಲಕ್ಷದ ಎಂಟು ಸಾವಿರ ಮತದಾರರು ಮತಪಟ್ಟಿಯಿಂದ ಹೊರಗುಳಿದಿದ್ದಾರೆ. ಕ್ರಮೇಣವಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್‍ಗಳನ್ನು ಕಸಿದುಕೊಳ್ಳುವ ಹುನ್ನಾರವಿದು. ಇದರಿಂದ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆಂದು ಎಚ್ಚರಿಸಿದರು.

ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಉಮಾಪತಿ ಮಾತನಾಡಿ ಫಾರಂ ನಂ.7 ನ್ನು ನೀಡಿ ಕೆಲವರು ನಿಜವಾದ ಮತದಾರರ ಹೆಸರನ್ನು ಮತಪಟ್ಟಿಯಿಂದ ಡಿಲಿಟ್ ಮಾಡಿಸುವ ಕುತಂತ್ರ ನಡೆಸಿರುವುದರಿಂದ ಒಂದು ಕೋಟಿ ಮತದಾರರು ರಾಜ್ಯದಲ್ಲಿ ವಂಚಿತರಾಗಿದ್ದಾರೆ. ಎಸ್.ಐ.ಆರ್.ನ ಪ್ರಜಾಪ್ರಭುತ್ವದ ನೀತಿ ವಿರೋಧಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನ.1 ರಂದು ಹೋರಾಟ ನಡೆಯಲಿದೆ ಎಂದು ತಿಳಿಸಿದರು.
ಕಾಂ.ಹನುಮಂತಪ್ಪ, ಕಾಂ.ಈ.ಸತ್ಯಕೀರ್ತಿ, ಕಾಂ. ಬಿ.ಬಸವರಾಜಪ್ಪ, ಕಾಂ. ಎನ್.ಸಿ.ಕುಮಾರಸ್ವಾಮಿ, ಕಾಂ.ಪೆನ್ನಯ್ಯ, ಕಾಂ.ಗಿರೀಶ್, ಕಾಂ.ಜಮುನಾಬಾಯಿ ಸೇರಿದಂತೆ ನೂರಾರು ಮಹಿಳೆಯರು ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now