Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಎಸ್ಸಿ. ನರ್ಸಿಂಗ್ ಪ್ರವೇಶಕ್ಕೆ ಅವಕಾಶ: ಚಿತ್ರದುರ್ಗದಲ್ಲಿ ಒಂದು ಸೀಟು ಭರ್ತಿಗೆ ಅರ್ಜಿ ಆಹ್ವಾನ

---Advertisement---

ಚಿತ್ರದುರ್ಗ.28:  ಚಿತ್ರದುರ್ಗ ಮೆಡಿಕಲ್ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ (ಸಿ.ಎಂ.ಸಿ.ಆರ್.ಐ) ಕ್ಯಾಂಪಸ್‌ನಲ್ಲಿರುವ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿನಲ್ಲಿ 2026-27ನೇ ಸಾಲಿನ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ನ ಪ್ರವೇಶಾತಿಗೆ ಕೆಇಎ ವತಿಯಿಂದ ಕೌನ್ಸೆಲಿಂಗ್ ನಡೆಸಿ ನಂತರ ಭರ್ತಿಯಾಗದೆ ಉಳಿದಿರುವ 01 ಸೀಟನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುವುದು.

ಕೆಇಎನಲ್ಲಿ ನೋಂದಾಯಿಸಿಕೊಂಡಿರುವ ಮತ್ತು ಸಿಇಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಪಾರದರ್ಶಕವಾಗಿ ಸರ್ಕಾರದ ಆದೇಶದ ಪ್ರಕಾರ ಪ್ರಾಂಶುಪಾಲರ ಹಂತದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಇದಕ್ಕಾಗಿ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು, ನೋಡೆಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಮೂಲಕ ಆಫ್‌ಲೈನ್ ಕೌನ್ಸೆಲಿಂಗ್ ನಡೆಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 30 ರಂದು ಮಧ್ಯಾಹ್ನ 1 ಗಂಟೆಯೊಳಗೆ ಚಿತ್ರದುರ್ಗ ಸಮೀಪದ ಜಿ.ಆರ್.ಹಳ್ಳಿಯ, ದಾವಣಗೆರೆ ವಿಶ್ವವಿದ್ಯಾಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆವರಣದಲ್ಲಿ ಸರ್ಕಾರಿ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಕೌನ್ಸೆಲಿಂಗ್ ನಡೆಸಿ ಮಧ್ಯಾಹ್ನ 1.00 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು. ಸೀಟು ಹಂಚಿಕೆ ಆಗಿರುವ ಅಭ್ಯರ್ಥಿಗಳು ಅದೇ ದಿನದಂದು ಸಂಜೆ 5.00 ಗಂಟೆಯ ಒಳಗೆ ಕಾಲೇಜಿಗೆ ಭೇಟಿ ನೀಡಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕೆಲಸದ ಸಮಯದಲ್ಲಿ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ನರ್ಸಿಂಗ್ ಕಾಲೇಜು ಮುಖ್ಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=======

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now