Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ : ದಾವಣಗೆರೆ: ಪಟಾಕಿ ಮಾರಾಟಕ್ಕೆ ಕಟ್ಟುನಿಟ್ಟಿನ ನಿಯಮ : ಸುರಕ್ಷತೆಗೆ ಒತ್ತು

---Advertisement---

ದಾವಣಗೆರೆ : ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸುರಕ್ಷಿತ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸಂತೋಷ್‌ ಕುಮಾರ್‌ ಅವರು ಸೂಚನೆ ನೀಡಿದರು.

ಅವರು ಅಕ್ಟೋಬರ್‌ 19 ರಂದು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ನಿರ್ಮಿಸುವ ಹಾಗೂ ಮುಂಜಾಗ್ರತೆ ಕ್ರಮಗಳ ಕುರಿತು ನಡೆದ ವಿಡಿಯೋ ಸಂವಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೊಲೀಸ್‌ ಇಲಾಖೆ, ಅಗ್ನಿಶಾಮಕ ಇಲಾಖೆ, ಕಂದಾಯ ಇಲಾಖೆ, ಪಿ.ಡಬ್ಲೂಡಿ ಇಲಾಖೆ, ಮಹಾನಗರ ಪಾಲಿಕೆ/ಪುರಸಭೆ/ನಗರಸಭೆ ಪರಿಸರ ಮಾಲಿನ್ಯ ನಿಯಂತ್ರಣ  ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ರೀತಿಯ ಅವಘಡ ಸಂಭವಿಸದ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಶಸ್ವಿಯಾಗಿ ನಿರ್ವಹಿಸಲು ಸೂಚಿಸಿದರು.

ನಗರದ ಹೈಸ್ಕೂಲ್‌ ಕ್ರೀಡಾಂಗಣದಲ್ಲಿ, ತಾಲ್ಲೂಕು ಮಟ್ಟದಲ್ಲಿ ಹರಿಹರ, ಮಲೇಬೆನ್ನೂರು, ಜಗಳೂರು ತಾಲ್ಲೂಕುಗಳಲ್ಲಿ ತನಿಖೆ ನಡೆಸಿ ಮಾರಾಟ ಮಳಿಗೆಗಳನ್ನು ತೆರೆಯಲು ಸೂಕ್ತವಾದ ಸ್ಥಳಗಳನ್ನು ಗುರುತಿಸುವಂತೆ ತಿಳಿಸಿದರು.

ಪಟಾಕಿ ಮಾರಾಟದ ಪರವಾನಿಗೆ ಗಳನ್ನು ಪೊಲೀಸ್‌ ಇಲಾಖೆ ಮತ್ತ ಅಗ್ನಿ ಶಾಮಕ ಇಲಾಖೆಯ ಅಭಿಪ್ರಾಯದಂತೆ ನೀಡಲಾಗುವುದು ಯಾವುದೇ ಮಾರಾಟ  ಪರವಾನಗಿ ಇಲ್ಲದೆ ಮಾರಾಟ ಮಾಡಿದಲ್ಲಿ ಕಾನೂನು ಕ್ರಮವಹಿಸಲಾಗುವುದು. ಪಟಾಕಿ ವರ್ತಕರು ಸರ್ಕಾರದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಯಾವುದೇ ಅವಘಡವಾಗದಂತೆ ಮುನ್ನೆಚರಿಕೆ ಕ್ರಮಗಳನ್ನು ವಹಿಸಬೇಕು. ಪ್ರಸ್ತುತ 121 ಕ್ಕೂ ಹೆಚ್ಚು ಪರವಾನಗಿ ಕೋರಿ ಅರ್ಜಿಗಳು ಸ್ವೀಕೃತವಾಗಿದೆ. ಇನ್ನು ಹೆಚ್ಚಿನ ಅರ್ಜಿಗಳು ಸ್ವೀಕೃತಗೊಳ್ಳಲಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಗೆ ಒತ್ತು ಕೊಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದರು.

ಪೊಲೀಸ್‌ ಇಲಾಖೆ, ಅಗ್ನಿಶಾಮಕ ಇಲಾಖೆಯು ಪಟಾಕಿ ಪ್ರವರ್ತಕರಿಗೆ ತರಬೇತಿ ನೀಡುವ ಬಗ್ಗೆ ಕ್ರಮವಹಿಸಬೇಕು ಒಟ್ಟಾರೆಯಾಗಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ರೀತಿಯ ಅವಘಡ ಸಂಭವಿಸದ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Join WhatsApp

Join Now

Join Telegram

Join Now