Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭಾನುವಾರವೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ : ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ 

---Advertisement---

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನವೆಂಬರ್ 1ರ ಭಾನುವಾರದಂದು ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕಡ್ಡಾಯವಾಗಿ ಹಾಗೂ ಗೌರವಪೂರ್ವಕವಾಗಿ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ.

ರಾಷ್ಟ್ರೀಯ ಹಬ್ಬಗಳು, ನಾಡಹಬ್ಬವಾದ ಕರ್ನಾಟಕ ರಾಜ್ಯೋತ್ಸವ ಹಾಗೂ ಇತರ ಪ್ರಮುಖ ಜಯಂತಿಗಳನ್ನು ನಿಯಮಾನುಸಾರ ಆಯಾ ದಿನಗಳಂದೇ ಗೌರವಪೂರ್ವಕವಾಗಿ ಆಚರಿಸಲು ಈ ಹಿಂದೆಯೇ ಜ್ಞಾಪನ ಪತ್ರದ ಮೂಲಕ ಸೂಚನೆ ನೀಡಲಾಗಿತ್ತು.

 ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವವು ಭಾನುವಾರ ಬಂದಿದ್ದರೂ ಸಹ, ನಿಯಮಾನುಸಾರ ಕಡ್ಡಾಯವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಮತ್ತೊಮ್ಮೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

Join WhatsApp

Join Now

Join Telegram

Join Now