Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿಯ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಲನಚಿತ್ರ ಪ್ರದರ್ಶನ ಕಡ್ಡಾಯ

---Advertisement---

 

ಬಳ್ಳಾರಿ,ಅ.29 : ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ನವೆಂಬರ್ 1 ರಿಂದ ನವೆಂಬರ್ 7 ರವರೆಗೆ ಒಂದು ವಾರಗಳ ಕಾಲ ಕಡ್ಡಾಯವಾಗಿ ಕನ್ನಡ ಚಲನಚಿತ್ರಗಳನ್ನೇ ಪ್ರದರ್ಶಿಸಬೇಕೆಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ. ‘ಕರ್ನಾಟಕ ಸಿನಿಮಾಸ್ (ರೆಗ್ಯುಲೇಶನ್) ರೂಲ್ಸ್ 1971’ರ ನಿಯಮ 7-ಎ ಅನ್ವಯ ಜಿಲ್ಲೆಯ ಎಲ್ಲಾ ಕಾಯಂ, ಅರೆ-ಕಾಯಂ, ತಾತ್ಕಾಲಿಕ ಚಿತ್ರಮಂದಿರಗಳು ಹಾಗೂ ವಿಡಿಯೋ ಚಿತ್ರಮಂದಿರಗಳಲ್ಲಿ ನವೆಂಬರ್ 1 ರಿಂದ 7 ರವರೆಗೆ ಕನ್ನಡ ಚಿತ್ರಗಳನ್ನೇ ಪ್ರದರ್ಶಿಸಬೇಕು.

ಒಂದು ವೇಳೆ ಈ ನಿಯಮವನ್ನು ಉಲ್ಲಂಘಿಸಿ, ಒಂದು ವಾರ ಕನ್ನಡ ಚಿತ್ರ ಪ್ರದರ್ಶಿಸದಿದ್ದಲ್ಲಿ ಅಂತಹ ಚಿತ್ರಮಂದಿರಗಳ ಪರವಾನಗಿಯನ್ನು (ಲೈಸೆನ್ಸ್) ನವೀಕರಿಸುವುದಿಲ್ಲ.
ಜೊತೆಗೆ, ಪ್ರತಿ ವರ್ಷದಂತೆ ಈ ಬಾರಿಯೂ ಚಿತ್ರಮಂದಿರಗಳ ಮಾಲೀಕರು ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ಚಿತ್ರಮಂದಿರಗಳಿಗೆ ಕಡ್ಡಾಯವಾಗಿ ದೀಪಾಲಂಕಾರ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now