Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಟ್ಟಿ ಜಾತ್ರಾ ಮಹೋತ್ಸವ: 100 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್.11) : ನಾಯಕನಹಟ್ಟಿಯಲ್ಲಿ ಮಾರ್ಚ್ 18 ರಿಂದ 21 ರವರೆಗೆ ನಡೆಯಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ ಮತ್ತು ಚಳ್ಳಕೆರೆ ಘಟಕಗಳಿಂದ ಒಟ್ಟು 100 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲು ಕ್ರಮಕೈಗೊಳ್ಳಲಾಗಿದೆ.

ವಿಶೇಷ ವಾಹನಗಳ ಕಾರ್ಯಾಚರಣೆ ಮಾರ್ಗ ಇಂತಿದೆ. ಚಿತ್ರದುರ್ಗ-ನಾಯಕನಹಟ್ಟಿ ವಯಾ ಬೆಳಗಟ್ಟ, ತುರುವನೂರು, ಮುಷ್ಟೂರು, ಚಿತ್ರದುರ್ಗ-ನಾಯಕನಟ್ಟಿ ವಯಾ ಬೆಳಗಟ್ಟ, ಹಾಯ್ಕಲ್, ಚಳ್ಳಕೆರೆ, ಚಳ್ಳಕೆರೆ-ನಾಯಕನಹಟ್ಟಿ ವಯಾ ನೇರ್ಲಗುಂಟೆ, ಹಿರಿಯೂರು-ನಾಯಕನಹಟ್ಟಿ ವಯಾ ಸಾಣಿಕೆರೆ-ಚಳ್ಳಕೆರೆ-ನೇರ್ಲಗುಂಟೆ, ನಾಯಕನಹಟ್ಟಿ-ಪರಶುರಾಂಪುರ ವಯಾ ಚಳ್ಳಕೆರೆ, ಚಿತ್ರದುರ್ಗ-ನಾಯಕನಹಟ್ಟಿ ವಯಾ ಕಲ್ಲೇದೇವರಪುರ, ನಾಯಕನಹಟ್ಟಿ-ಮೊಳಕಾಲ್ಮುರು ವಯಾ ತಳಕು ಕ್ರಾಸ್ ಮಾರ್ಗದಲ್ಲಿ ಸಂಚರಿಸಲಿವೆ.

ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನ ಕಾರ್ಯಾರಣೆ ಮಾಡಲಾಗುವುದು. ಭಕ್ತಾಧಿಗಳು ವಿಶೇಷ ವಾಹನಗಳ ಸದುಪಯೋಗವನ್ನು ಉತ್ತಮ ರೀತಿಯಿಂದ ಪಡೆದುಕೊಳ್ಳಬೇಕು ಎಂದು ರಾಜ್ಯ ರಸ್ತೆ ಸಾರಿಗೆ ನಿಮಗ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!