Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪರಿಷತ್ ಚುನಾವಣೆ ಸೋಲಿಗೆ ಧೃತಿಗೆಡಬೇಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳೇ ನಮ್ಮ ಮುಂದಿನ ಸವಾಲು : ಕಾರೆಹಳ್ಳಿ ಉಲ್ಲಾಸ್

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 29 : ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವುದಕ್ಕೆ ಯಾರು ಧೃತಿಗೆಡುವುದು ಬೇಡ. ಮುಂದೆ ನಡೆಯುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳು ನಮ್ಮ ಮುಂದಿರುವ ಸವಾಲು ಎಂದು ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಯೂತ್ ಕಾಂಗ್ರೆಸ್ ಪದಾಧಿಕಾರಿಗಳನ್ನು ಎಚ್ಚರಿಸಿದರು.

ಜಿಲ್ಲಾ ಯೂತ್ ಕಾಂಗ್ರೆಸ್ ಸಮಿತಿ ಹಾಗೂ ಚಿತ್ರದುರ್ಗ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕಾರಿಣಿ
ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಆಗಲ್ಲ. ರಾಜ್ಯ ಸರ್ಕಾರ ಜನರಿಗೆ ನೀಡಿರುವ ಐದು ಉಚಿತ ಗ್ಯಾರೆಂಟಿಗಳನ್ನು ಪ್ರತಿ ಮನೆ ಮನೆಗೆ ತಿಳಿಸುವ ಕೆಲಸವನ್ನು ಯೂತ್ ಕಾಂಗ್ರೆಸ್ ಮಾಡಬೇಕಿದೆ. ಪ್ರತಿ ಪಂಚಾಯಿತಿ ಮತ್ತು ವಾರ್ಡ್ ಮಟ್ಟಗಳಲ್ಲಿ ಪಕ್ಷವನ್ನು ಬಲಪಡಿಸಿದರೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ. ಹತ್ತು ಸಾವಿರ ಯುವಕರನ್ನು ಸೇರಿಸಿ ಚಿತ್ರದುರ್ಗದಲ್ಲಿ ದೊಡ್ಡ ಸಮಾವೇಶ ಮಾಡುವ ಚಿಂತನೆಯಿದೆ. ತಳಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಿ ಕಾಂಗ್ರೆಸ್‍ಗೆ ಶಕ್ತಿ ತುಂಬುವಂತೆ ಹೇಳಿದರು.

ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆಯ ಆಕಾಂಕ್ಷಿಗಳಿಗೆ ಪಕ್ಷದಿಂದ ಟಿಕೇಟ್ ಕೊಡಿಸುವ ಭರವಸೆ ನೀಡಿದ ಕಾರೆಹಳ್ಳಿ ಉಲ್ಲಾಸ್ ಈಗಿನಿಂದಲೇ ಪಕ್ಷದ ಕೆಲಸ ಮಾಡಿ ಗುರುತಿಸಿಕೊಳ್ಳಿ. ಆಗ ನಿಮ್ಮ ಹೆಸರುಗಳನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡಲು ಸುಲಭವಾಗುತ್ತದೆ ಎಂದರು.

ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಮ್ ಮಾತನಾಡಿ ಪಕ್ಷದಲ್ಲಿ ಸಕ್ರಿಯವಾಗಿರುವವರ ಹೆಸರುಗಳನ್ನು ಪ್ರೊಮೋಷನ್‍ಗೆ ಕಳಿಸುತ್ತವೆ. ಉದಾಸೀನ ತೋರುವವರನ್ನು ತೆಗೆದು ಹಾಕಲಾಗುವುದು. ಬ್ಲಾಕ್ ಕಮಿಟಿಗಳು ಶಕ್ತಿಶಾಲಿಯಾಗಿ ಪಕ್ಷದ ಕೆಲಸ ಮಾಡಬೇಕು. ಏಕೆಂದರೆ ಮುಂದೆ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಿವೆ. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಜವಾಬ್ದಾರಿಯನ್ನರಿತು ಪಕ್ಷದ ಗೆಲುವಿಗೆ ಶ್ರಮಿಸಬೇಕೆಂದು ಸೂಚಿಸಿದರು.
ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್, ಜಿಲ್ಲಾ ಕಾರ್ಯದರ್ಶಿ ತಾಹೀರ್, ಪ್ರಧಾನ ಕಾರ್ಯದರ್ಶಿ ನಿಶ್ಚಿತ್(ಚಿಂಟು) ಉಪಾಧ್ಯಕ್ಷ ನಿಜಾಮ್ ಇವರುಗಳು ವೇದಿಕೆಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now