Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಹುಲ್ ಗಾಂಧಿಯಿಂದ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಯತ್ನ: ಸಂಸದ ಗೋವಿಂದ ಕಾರಜೋಳ ಆರೋಪ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

 

ಸುದ್ದಿಒನ್, ಚಿತ್ರದುರ್ಗ, ಅ. 30 : ದೇಶದ ಏಕತೆ, ಅಖಂಡತೆ ಮತ್ತು ಸಂವಿಧಾನವನ್ನು ದುರ್ಬಳಕೆ ಮಾಡಿಕೊಂಡು ಅರಾಜಕತೆ ಸೃಷ್ಟಿಸುತ್ತಿರುವ ವಿರೋಧ ಪಕ್ಷಗಳ ಷಡ್ಯಂತ್ರವನ್ನು ಜನರಿಗೆ ತಿಳಿಸಿ, ಪ್ರಜಾಪ್ರಭುತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಸಂಸದರಾದ ಗೋವಿಂದ ಕಾರಜೋಳ ತಿಳಿಸಿದರು.

ಚಿತ್ರದುರ್ಗ ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಶುಕ್ರವಾರ ಪ್ರಜಾಪ್ರಭುತ್ವವನ್ನು ಉಳಿಸಿ ಅರಾಜಕತೆಯನ್ನು ಅಳಿಸಿ ಜನಾಂದೋಲನದ ಕಾರ್ಯಕ್ರಮದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷವು ದೇಶಾದ್ಯಂತ ಪ್ರಜೆಗಳ ಸಹಕಾರದೊಂದಿಗೆ ‘ಪ್ರಜಾಪ್ರಭುತ್ವ ರಕ್ಷಿಸಿ, ಅರಾಜಕತೆ ತೊಲಗಿಸಿ’ ಎಂಬ ವಿಶೇಷ ಅಭಿಯಾನವನ್ನು ಆರಂಭಿಸಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧಿಯವರ ಹೆಸರಿಟ್ಟುಕೊಂಡಿರುವ ರಾಹುಲ್ ಗಾಂಧಿಯವರು ದೇಶದಲ್ಲಿ ನಾಗರಿಕ ದಂಗೆಯನ್ನು ಎಬ್ಬಿಸಲು ಮತ್ತು ಅರಾಜಕತೆಯನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ನರೇಂದ್ರ ಮೋದಿಯವರ ಸರ್ಕಾರವನ್ನು ಅಸ್ಥಿರಗೊಳಿಸುವುದು ಮತ್ತು ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸಿ ತಾವೇ ಪ್ರಧಾನಿಯಾಗುವ ಏಕೈಕ ಗುರಿಯನ್ನು ರಾಹುಲ್ ಗಾಂಧಿ ಹೊಂದಿದ್ದಾರೆ ಎಂದರು.

ಸಂವಿಧಾನಿಕ ಸಂಸ್ಥೆಯಾಗಿರುವ ಚುನಾವಣೆ ಆಯೋಗದ ಮೇಲೆ ಮತ್ತು ಎಸ್‍ಐಆರ್ ಕುರಿತು ರಾಹುಲ್ ಗಾಂಧಿಯವರು ತಪ್ಪು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ತಿಳಿಸಿದರು. ಸ್ವಾತಂತ್ರ್ಯದ ನಂತರ ದೇಶದಲ್ಲಿ ನಡೆದಿರುವ 12 ಎಸ್‍ಐಆರ್ ಗಳಲ್ಲಿ 10 ಕಾಂಗ್ರೆಸ್ ಆಡಳಿತದಲ್ಲೇ ನಡೆದಿವೆ ಎಂದು ಅಂಕಿಅಂಶಗಳ ಸಮೇತ ವಿವರಿಸಲಾಯಿತು. ರಾಹುಲ್ ಗಾಂಧಿಯವರಿಗೆ 1994ರಿಂದ ಬ್ರಿಟಿಷ್ ಪೌರತ್ವವಿರುವುದರಿಂದ ಅವರು ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸುವಾಗ ಅದನ್ನು ಮುಚ್ಚಿಟ್ಟಿದ್ದರು ಈ ಕುರಿತು ಸುಪ್ರೀಂ ಕೋರ್ಟ್‍ನಲ್ಲಿಯೂ ವಿಚಾರಣೆ ನಡೆಯುತ್ತಿದೆ ಕಾಂಗ್ರೆಸ್ ಪಕ್ಷವು ಪದೇಪದೆ ಸೋಲಿನ ಹತಾಶೆಯಿಂದ ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದೆ ಬಿಜೆಪಿಯನ್ನು ‘ಕಾಕ್ರೋಚ್ ಜನತಾ ಪಾರ್ಟಿ’ ಎಂದು ಕರೆಯುವ ಮೂಲಕ ಕಾಂಗ್ರೆಸ್ ನಾಯಕರು ಗಲಾಟೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.

ಎಸ್.ಐ.ಆರ್‍ಗೂ ಪಡಿತರ ಚೀಟಿ, ಪಿಂಚಣಿಗೂ ಸಂಬಂಧ ಇಲ್ಲ: ಸುಳ್ಳು ಅಪಪ್ರಚಾರಕ್ಕೆ ಬಲಿಯಾಗಬೇಡಿ ಚುನಾವಣಾ ಆಯೋಗದ ಈ ಪ್ರಕ್ರಿಯೆಗೆ ಎಲ್ಲಾ ಮೂರು ಚುನಾವಣಾ ಆಯುಕ್ತರ ಜಂಟಿ ಅನುಮೋದನೆ ಇದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಸೇರಿದಂತೆ ಮೂವರು ಆಯುಕ್ತರು ಸಹಿ ಮಾಡಿ ಸುಪ್ರೀಂ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಇದು ಕಾನೂನುಬದ್ಧ ಪ್ರಕ್ರಿಯೆ ಎಂದು ಸ್ಪಷ್ಟಪಡಿಸಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎಸ್.ಐ.ಆರ್ ಪ್ರಕ್ರಿಯೆ ಬಗ್ಗೆ ಕೆಲವರು ಉದ್ದೇಶಪೂರ್ವಕವಾಗಿ ಸುಳ್ಳು ಅಪಪ್ರಚಾರ ಮಾಡಿ ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಇತ್ತೀಚೆಗೆ ಕೆಲವರು “ಮತದಾರರ ಪಟ್ಟಿಯಿಂದ ಹೆಸರು ತೆಗೆದರೆ ಪಡಿತರ ಚೀಟಿ ಹೋಗುತ್ತದೆ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಪಿಂಚಣಿ ಬಂದ್ ಆಗುತ್ತದೆ, ಪಾಸ್‍ಪೋರ್ಟ್ ರದ್ದಾಗುತ್ತದೆ” ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದು ಶುದ್ಧ ಸುಳ್ಳು ಎಂದರು.

ಚುನಾವಣಾ ಆಯೋಗದ SIಖ ಪ್ರಕ್ರಿಯೆಗೂ ಪಡಿತರ ಚೀಟಿಗೂ ಯಾವುದೇ ಸಂಬಂಧ ಇಲ್ಲ. ಪಿಂಚಣಿಗೂ ಯಾವುದೇ ಸಂಬಂಧ ಇಲ್ಲ. ಪಾಸ್‍ಪೋಟ್ರ್ರ ರದ್ದು ಮಾಡುವ ವ್ಯವಸ್ಥೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ಬಹಳ ಸ್ಪಷ್ಟವಾಗಿ ಹೇಳಿದೆ. ಆದ್ದರಿಂದ ಜನರು ಯಾವುದೇ ಆತಂಕಕ್ಕೆ ಒಳಗಾಗಬಾರದು, ಅಪಪ್ರಚಾರಕ್ಕೆ ಬಲಿಯಾಗಬಾರದು ಚುನಾವಣಾ ಆಯೋಗ ಪಾರದರ್ಶಕವಾಗಿ ಕೆಲಸ ಮಾಡುತ್ತಿದೆ. ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.

ದೇಶದ ಅಭಿವೃದ್ಧಿಯನ್ನು ಸಹಿಸದೆ, ಕರೋನಾ ಸಮಯದಲ್ಲಿಯೂ ಲಸಿಕೆ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿ ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರ ಧೋರಣೆಯನ್ನು ಖಂಡಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಪ್ರಭಾರಿಗಳಾದತ್ರಿದೇವ್‍ಯವರು ಚಿತ್ರದುರ್ಗದಲ್ಲಿ ನಗರದಲ್ಲಿ ಕನಕ ವೃತ್ತದಿಂದ ಡಿಸಿ ಕಚೇರಿ ವರೆಗೂ ಜನಜಾಗೃತಿ ಗಾಗಿ ನ.4ರಂದು ನಗರದಲ್ಲಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದರಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ

ಪತ್ರಿಕಾ ಗೋಷ್ಟಿಯಲ್ಲಿ ಮಾಜಿಶಾಸಕ ಎಸ್.ಕೆ. ಬಸವರಾಜನ್, ಕಾಡುಗೊಲ್ಲರ ರಾಜ್ಯಾಧ್ಯಕ್ಷ, ಬಿಜೆಪಿ ಮುಖಂಡ ರಾಜಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರೀ ಗೀರೀಶ್, ವೆಂಕಟೇಶ್ ಯಾದವ್, ಮೋಹನ್ ಕುಮಾರ್, ಡಾ,ಮಂಜುನಾಥ್, ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಮಾಧ್ಯಮ ವಕ್ತಾರರಾದ ನಾಗರಾಜ್ ಬೇದ್ರೆ ಜಿ.ಪಂ.ಮಾಜಿ ಉಪಾಧ್ಯಕ್ಷ ದ್ಯಾಮಣ್ಣ, ಸಹ ವಕ್ತಾರ ನವೀನ ಚಾಲುಕ್ಯ ಸೇರಿದಂತೆ ಇತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ