Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: 16ನೇ ದಿನಕ್ಕೆ ಕಾಲಿಟ್ಟ ‘ಸೂರಿಗಾಗಿ ಸಮರ’; ಬಡವರಿಗೆ ನಿವೇಶನ ನೀಡುವವರೆಗೂ ಹೋರಾಟ ನಿಲ್ಲದು ಎಂದ ಸುರೇಶ್‌ಬಾಬು

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 30 : ಭಾರತ ಕಮ್ಯುನಿಸ್ಟ್ ಪಕ್ಷದ ಜೊತೆಗೂಡಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಜಿಲ್ಲಾಧಿಕಾರಿ ವೃತ್ತದಲ್ಲಿ ನಡೆಸುತ್ತಿರುವ ಸೂರಿಗಾಗಿ ಸಮರ ಶುಕ್ರವಾರ ಹದಿನಾರನೆ ದಿನಕ್ಕೆ ಕಾಲಿಟ್ಟಿದೆ.

ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‍ಬಾಬು ಮುಷ್ಕರವನ್ನುದ್ದೇಶಿಸಿ ಮಾತನಾಡುತ್ತ ಜಿಲ್ಲೆಯಲ್ಲಿರುವ ಬಡವರಿಗೆ ನಿವೇಶನಗಳನ್ನು ನೀಡಿ ಮನೆಗಳನ್ನು ಕಟ್ಟಿಸಿಕೊಳ್ಳಲು ಸರ್ಕಾರ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನೇಕ ಹೋರಾಟ, ಚಳುವಳಿ, ಮುಷ್ಕರಗಳನ್ನು ನಡೆಸಿದ್ದರೂ ಇದುವರೆವಿಗೂ ಕಂದಾಯ ಭೂಮಿಯನ್ನು ಗುರುತಿಸಲು ಆಗುತ್ತಿಲ್ಲ. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಮೊದಲು ಭೂಮಿಯನ್ನು ಗುರುತಿಸಿ ನಿವೇಶನಗಳನ್ನಾಗಿ ಮಾಡಿ ಬಡವರಿಗೆ ಮನೆಗಳನ್ನು ಕಟ್ಟಿಕೊಳ್ಳಲು ನೆರವಿಗೆ ಬರಬೇಕು. ಅಲ್ಲಿಯವರೆಗೂ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲವೆಂದು ಎಚ್ಚರಿಸಿದರು.
ಕಮ್ಯುನಿಸ್ಟ್ ಪಕ್ಷದ ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ಕಾಂ.ಜಾಫರ್‍ಷರೀಫ್ ಸೇರಿದಂತೆ ನೂರಾರು ಮಹಿಳೆಯರು ಸಮರದಲ್ಲಿ ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now